ಸಕ್ರಿಯ ರಾಜಕಾರಣದಿಂದ ಅಂತರ ಕಾಯ್ದುಕೊಂಡಿರುವ ರಮ್ಯಾ ಅವರು ಏನುಮಾಡುತ್ತಿದ್ದಾರೆ ಎಂಬ ಚರ್ಚೆ ನಡೆಯುತಿದ್ದ ಬೆನ್ನಲ್ಲೇ ಇದೀಗ ಮತ್ತೆ ಬೆಳ್ಳಿತೆರೆಗೆ ರೀಎಂಟ್ರಿ ಕೊಡುತ್ತಿದ್ದಾರೆ. ದಿಲ್ ಕಾ ರಾಜಾ ಚಿತ್ರದ ಮೂಲಕ ಮೋಹಕ ತಾರೆ ರಮ್ಯಾ ಅವರು ಸ್ಯಾಂಡಲ್'ವುಡ್'ಗೆ ರೀ ಎಂಟ್ರಿ ಕೊಡುತ್ತಿದ್ದಾರೆ.
ನಟ ಪುನೀತ್ ರಾಜ್ ಕುಮಾರ್ ಅಭಿನಯದ ಅಭಿ ಸಿನಿಮಾದ ಮೂಲಕ ಚಂದನವನಕ್ಕೆ ಪಾದಾರ್ಪಣೆ ಮಾಡಿದ್ದ ರಮ್ಯಾ ಅವರು ನಂತರದ ದಿನಗಳಲ್ಲಿ ಮೋಹಕ ತಾರೆ, ಸ್ಯಾಂಡಲ್'ವುಡ್ ಕ್ವೀನ್ ಎಂದೇ ಖ್ಯಾತಿ ಪಡೆದಿದ್ದರು. ಆದರೆ, ಸಿನಿಮಾಮರಂಗದಿಂದ ದೂರ ಸರಿದು ಹಲವು ವರ್ಷಗಳು ಕಳದೆದಿದ್ದವು. ಕಾಂಗ್ರೆಸ್ ಪಕ್ಷದ ಸೋಷಿಯಲ್ ಮೀಡಿಯಾ ಮುಖ್ಯಸ್ಥೆಯಾಗಿ ಕಾರ್ಯನಿರ್ವಹಿಸಿದ್ದರು. ಇದರ ನಡುವೆಯೇ ಕೊನೆಯದಾಗಿ ನಾಗರಹಾವು ಸಿನಿಮಾದ ಮೂಲಕ ಅಭಿಮಾನಿಗಳ ಮುಂದೆ ಬಂದಿದ್ದರು.
ಇದಾದ ಬಳಿಕ ಎಲ್ಲಿಯೂ ತೆರೆ ಮೇಲೆ ಕಾಣಿಸಿಕೊಂಡಿರಲಿಲ್ಲ. ಇದೀಗ ರಾಜಕೀಯದಿಂದ ಅಂತರ ಕಾಯ್ದುಕೊಂಡಿರುವ ರಮ್ಯಾ ಅವರು, ದಿಲ್ ಕಾ ರಾಜ ಸಿನಿಮಾ ಮೂಲಕ ತೆರೆ ಮೇಲೆ ಕಾಣಿಸಿಕೊಂಡಿದ್ದಾರೆ. ಇತ್ತೀಚೆಗಷ್ಟೇ ಸಿನಿಮಾದ ಟೀಸರ್ ಬಿಡುಗಡೆಯಾಗಿದ್ದು, ಟೀಸರ್ ನಲ್ಲಿ ರಮ್ಯಾ ಅವರು ಅಭಿನಯಿಸಿರುವುದು ಕಂಡು ಬಂದಿದೆ. ಈ ಮೂಲಕ ಸುಮಾರು 5 ವರ್ಷಗಳ ಬಳಿಕ ಅಭಿಮಾನಿಗಳ ಮುಂದೆ ಮೋಹಕ ತಾರೆ ಬಂದಿದ್ದಾರೆ