ಬೆಂಗಳೂರಿನ ರಸ್ತೆಯಲ್ಲಿ ಯುವತಿಯೊಬ್ಬಳು ತುಂಡುಡುಗೆ ಧರಿಸಿದ್ದಕ್ಕೆ ಯುವಕನಿಬ್ಬ ಆಕ್ಷೇಪ ವ್ಯಕ್ತಪಡಿಸಿದ್ದಾನೆ. ಆದರೆ, ಅದನ್ನು ಕೇಳಲು ನೀವ್ಯಾರು ಎಂದು ಪ್ರತಿರೋಧ ವ್ಯಕ್ತಪಡಿಸಿರುವ ಯುವತಿಯ ಸ್ನೇಹಿತ, ತರಾಟೆಗೆ ತೆಗೆದುಕೊಂಡು ವಿಡಿಯೋ ಮಾಡಿದ್ದಾನೆ. ಈ ಘಟನೆ ಎಚ್‌ಎಸ್‌ಆರ್ ಲೇಔಟ್‌ನಲ್ಲಿ ನಡೆದಿದೆ ಎಂದು ಹೇಳಲಾಗಿದೆ. ಅಪರಿಚಿತ ವ್ಯಕ್ತಿ ಮತ್ತು ತುಂಡುಡುಗೆ ಧರಿಸಿದ್ದ ಯುವತಿಯ ಸ್ನೇಹಿತನ ನಡುವಿನ ವಾಗ್ವಾದ ವಿಡಿಯೋ ಜಾಲತಾಣಗಳಲ್ಲಿ ವ್ಯಾಪಕವಾಗಿ ವೈರಲ್ ಆಗಿದ್ದು ಪರ ವಿರೋಧ ವ್ಯಕ್ತವಾಗುತ್ತಿದೆ.