ನವದೆಹಲಿ :ಭಾರತ ನಡೆಸಿದ ಚಂದ್ರಯಾನ -2 ಬಹುತೇಕ ಸಫಲತೆ ಕಂಡರೂ ಕೊನೆಯ ಹಂತದಲ್ಲಿ ವಿಕ್ರಮ್ ಲ್ಯಾಂಡರ್ ಸಂಪರ್ಕ ಕಳೆದುಕೊಂಡಿತ್ತು ,ಆದರೆ ಇದೀಗ ಬಂದ ವರದಿಗಳ ಪ್ರಕಾರ ಇಸ್ರೋ ವಿಕ್ರಮ ಲ್ಯಾಂಡರ್ ಅನ್ನು ಪತ್ತೆ ಹಚ್ಚುವಲ್ಲಿ ಯಶಸ್ವಿಯಾಗಿದೆ ಎಂದು ಇಸ್ರೋ ಅಧ್ಯಕ್ಷ ಕೆ ಶಿವನ್ ಮಾಹಿತಿ ನೀಡಿದ್ದಾರೆ .ವಿಕ್ರಮ್ ಲ್ಯಾಂಡರ್ ಚಂದ್ರನ ಮೇಲೆ ಇಳಿದಿರೋದು ಪತ್ತೆಯಾಗಿದ್ದು, ಚಂದ್ರನ ಕಕ್ಷೆಯಲ್ಲಿ ಸುತ್ತುತ್ತಿರುವ ಆರ್ಬಿಟರ್ ವಿಕ್ರಮ್ ಲ್ಯಾಂಡರ್ ನ ಛಾಯಾಚಿತ್ರಗಳನ್ನು ಬೆಂಗಳೂರಿನ ಇಸ್ರೋ ನಿಯಂತ್ರಣ ಕೊಠಡಿಗೆ ರವಾನಿಸಿದೆ. ಆದಷ್ಟು ಬೇಗ ವಿಕ್ರಮ್ ಲ್ಯಾಂಡರ್ ಜೊತೆ ಸಂಪರ್ಕ ಸಾಧಿಸಲಾಗುವುದು ಎಂದು ಶಿವನ್ ವಿಶ್ವಾಸ ವ್ಯಕ್ತಪಡಿಸಿದ್ದಾರೆ.