ಲಾಕ್ ಡೌನ್ ಉಲ್ಲಂಘಿಸಿ ರಸ್ತೆಗಿಳಿದಿದ್ದನ್ನು ಪ್ರಶ್ನಿಸಿದ ಪೋಲೀಸ್ ಪೇದೆಗಳ ಮೇಲೆ ಹಲ್ಲೆ ನಡೆಸಿದ ಇಬ್ಬರು ಪುಂಡರನ್ನು ಬೆಂಗಳೂರಿನ ಸಂಜಯನಗರ ಠಾಣಾ ಪೋಲೀಸರು ಬಂಧಿಸಿದ್ದಾರೆ. ಈ ಇಬ್ಬರು ಕರ್ತವ್ಯ ನಿರತ ಪೋಲೀಸ್ ಪೇದೆಗಳ ಮೇಲೆ ಮಾರಣಾಂತಿಕ ಹಲ್ಲೆನಡೆಸಿದ್ದರು. ಇಬ್ಬರ ವಿರುದ್ಧ ಕಠಿಣ ಕ್ರಮಕ್ಕೆ ಪೋಲೀಸ್ ಇಲಾಖೆ ಮುಂದಾಗಿದೆ.
ಸದ್ಯ ಸಂಜಯನಗರ ಪೋಲೀಸ್ ಠಾಣೆಯಲ್ಲಿ ಕಂಬಿ ಎಣಿಸುತ್ತಿರುವ ಇಬ್ಬರ ಮೇಲೆ ರೌಡಿಶೀಟರ್ ಓಪನ್ ಮಾಡಲಾಗಿದೆ. ಸೆಕ್ಷನ್ 353 ಅಡಿಯಲ್ಲಿ ಜಾಮೀನು ರಹಿತ ಕೇಸು ಹಾಕಲಾಗಿದೆ. ಈ ಬಗ್ಗೆ ಬೆಂಗಳೂರು ನಗರ ಪೋಲೀಸ್ ಆಯುಕ್ತ ಭಾಸ್ಕರ್ ರಾವ್ ಹೇಳಿಕೆ ಬಿಡುಗಡೆ ಮಾಡಿದ್ದಾರೆ. ಇಲ್ಲಿದೆ ನೋಡಿ ವೀಡಿಯೋ,