ಬೆಂಗಳೂರು: ಅಕ್ರಮ ಹಣ ವರ್ಗಾವಣೆ ಪ್ರಕರಣ ಕುರಿತಾಗಿ ಜೈಲು ಸೇರಿ ಜಾಮೀನಿನ ಮೇಲೆ ಬಿಡುಗಡೆಯಾದ ಮಾಜಿ ಸಚಿವ ಡಿ.ಕೆ ಶಿವಕುಮಾರ್ ಗಡ್ಡದಾರಿಯಾಗಿ ಕಂಡು ಬಂದಿದ್ದಾರೆ.ಬರೋಬ್ಬರಿ ೫೦ ದಿನಗಳ ಕಾಲ ಜಾರಿ ನಿರ್ದೇಶನಾಲಯ (ಇಡಿ) ಬಂಧನದ ಬಳಿಕ ತಿಹಾರ್ ಜೈಲುವಾಸದಲ್ಲಿದ್ದ ಡಿಕೆ ಜೈಲಿನಿಂದ ಹೊರ ಬಂದಿದ್ದು, ಅವರ ಮುಖಚಹರೆಯಲ್ಲಿ ಬದಲಾವಣೆ ಕಂಡು ಬಂದಿದೆ. ಜೈಲುವಾಸದ ನಂತರ ಡಿ.ಕೆ ಶಿವಕುಮಾರ್ ಅವರು ಗಡ್ಡ ಬಿಟ್ಟಿದ್ದು, ಈ ಕುರಿತು ಸಾಮಾಜಿಕ ಜಾಲ ತಾಣದಲ್ಲಿ ಡಿಕೆ ಶಿವಕುಮಾರ್ ಬೆಂಬಲಿಗರು ಮೆಚ್ಚುಗೆ ವ್ಯಕ್ತ ಪಡಿಸಿದ್ದು ,ಬಿಜೆಪಿ ಬೆಂಬಲಿಗರು ಶಿವಕುಮಾರ್ ಅವರ ಕಾಲೆಳೆದಿದ್ದಾರೆ.ತಮ್ಮ ಮನೆ ದೇವರು ಕಬ್ಬಾಳಮ್ಮನ ದರ್ಶನದ ನಂತರ ಗಡ್ಡ ತೆಗೆಯಲು ಡಿಕೆ ನಿರ್ಧರಿಸಿದ್ದಾರೆ ಏನು ಹೇಳಲಾಗಿದೆ.