ಹುಬ್ಬಳ್ಳಿಯಲ್ಲಿ ಪಾಕಿಸ್ತಾನ ಪರ ಘೋಷಣೆ ಕೂಗಿ ವೀಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಹರಿಬಿಟ್ಟಿದ್ದಕ್ಕೆ ಬಂಧನಕ್ಕೆ ಒಳಗಾಗಿರುವ ಮೂವರು ಕಾಶ್ಮೀರಿ ವಿದ್ಯಾರ್ಥಿಗಳ ವಿರುದ್ಧದ ದೂರಿನಲ್ಲಿ ದೇಶ ದ್ರೋಹ ಅಪರಾಧ ಎಸಗಿದ್ದಾರೆ ಎಂಬುದಾಗಿ ಪರಿಗಣಿಸುವಂತಹ ಯಾವುದೇ ಅಂಶ ಮೇಲ್ನೋಟಕ್ಕೆ ಕಂಡುಬರುತ್ತಿಲ್ಲ ಎಂದು ಹೈಕೋರ್ಟ್ ಅಭಿಪ್ರಾಯ ವ್ಯಕ್ತಪಡಿಸಿದೆ.
ಪ್ರಕರಣ ಸಂಬಂಧಪಟ್ಟಂತೆ ಜಾಮೀನು ಕೋರಿ ಆರೋಪಿಗಳಾದ ಬಸಿತ್ ಆಶಿಕ್ ಸೋಫಿ, ತಾಲೀಬ್ ಮಜೀದ್ ಮತ್ತು ಅಮೀರ್ ಮೊಹೀದ್ದೀನ್‌ವಾನಿ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಜಿ.ನರೇಂದರ್ ಅವರಿದ್ದ ವಿಭಾಗೀಯ ಪೀಠ ಈ ಅಭಿಪ್ರಾಯ ವ್ಯಕ್ತಪಡಿಸಿದೆ.
ದೇಶದ್ರೋಹದ ಪ್ರಕರಣಕ್ಕೆ ಸಂಬಂಧಿಸಿದಂತೆ ಸಲ್ಲಿಸಲಾಗಿರುವ ದಾಖಲೆ ಪರಿಶೀಲಿಸಿದಾಗ, ಅರ್ಜಿದಾರರು ದೇಶದ್ರೋಹದಂತಹ ಅಪರಾಧ ಎಸಗಿದ್ದಾರೆ ಎಂಬುದಾಗಿ ಪರಿಗಣಿಸುವಂತಹ ಯಾವುದೇ ಅಂಶ ದೂರಿನಲ್ಲಿ ಮೇಲ್ನೋಟಕ್ಕೆ ಕಾಣಿಸುತ್ತಿಲ್ಲ. ಪಾಕಿಸ್ತಾನ ಪರ ಘೋಷಣೆ ಕೂಗಿದ ವಿದ್ಯಾರ್ಥಿಗಳು ಕೇಂದ್ರ ಸರ್ಕಾರದಿಂದ ವಿದ್ಯಾರ್ಥಿ ವೇತನ ಪಡೆದಿದ್ದಾರೆ ಎಂಬುದಾಗಿ ಸರ್ಕಾರಿ ವಕೀಲರು ತಿಳಿಸಿದ್ದಾರೆ. ಆದರೆ ಈ ಅಂಶವನ್ನು ವಿಚಾರಣಾ ನ್ಯಾಯಾಲಯವು ಪರಿಗಣಿಸದಿರುವುದು ಆಶ್ವರ್ಯಕರ ಎಂದು ಅಭಿಪ್ರಾಯಪಟ್ಟಿತು.
ಅಲ್ಲದೆ, ಆರೋಪಿ ಸ್ಥಾನದಲ್ಲಿರುವ ಕಾಶ್ಮೀರಿ ವಿದ್ಯಾರ್ಥಿಗಳು ವಿದ್ಯಾರ್ಥಿ ವೇತನ ಪಡೆದಿರುವಾಗ ಅವರ ಮೂಲ ಹಾಗೂ ಹಿನ್ನೆಲೆಯನ್ನು ಕೇಂದ್ರ ಸರ್ಕಾರ ಪರಿಶೀಲನೆ ಮಾಡಿರುತ್ತದೆ. ಕೇವಲ ಗುಂಪೊಂದು ಅಪರಾಧ ಎಸಗಿದೆ ಎಂಬ ಕಲ್ಪನೆ ಮೇರೆಗೆ ಕೇಂದ್ರ ಸರ್ಕಾರದ ಪ್ರಯತ್ನಗಳನ್ನು ನಿರಾಕರಿಸುವುದಕ್ಕೆ ಆಗುವುದಿಲ್ಲ.
ಈ ಪ್ರಕರಣವನ್ನು ವಿಶಾಲ ದೃಷ್ಟಿಕೋನದಿಂದ ಪ್ರಾಸಿಕ್ಯೂಷನ್ ನೋಡಬೇಕಿದೆ. ಕಿರುನೋಟದ ಕ್ರೀಯೆಗಳ ಕಾರಣದಿಂದ ವಿಶಾಲ ದೃಷ್ಟಿಕೋನ ಕಳೆದುಕೊಂಡಿರುವುದನ್ನು ನೋಡುತ್ತಿರುವುದಕ್ಕೆ ದುಃಖಕರವಾಗಿದೆ ಎಂದು ಹೈಕೋರ್ಟ್ ಅಭಿಪ್ರಾಯಪಟ್ಟಿದೆ.
ಆದರೆ ಪಾಕಿಸ್ತಾನ ಪರ ಘೋಷಣೆ ಕೂಗಿರೋ ವೀಡಿಯೋ ಸಾಕ್ಷಿ ಇದ್ದರೂ ಅದನ್ನು ದೇಶದ್ರೋಹ ಎಂದು ಪರಿಗಣಿಸೋಕೆ ಆಗಲ್ಲ ಎನ್ನುತ್ತಿರುವ ಹೈಕೋರ್ಟ್ ನ ನ್ಯಾಯಾಧೀಶರ ಬಗ್ಗೆ ಆಕ್ರೋಶಗಳು ವ್ಯಕ್ತವಾಗುತ್ತಿದೆ. ನಮ್ಮ ದೇಶದ ನ್ಯಾಯಂಗ ವ್ಯವಸ್ಥೆ ಎಷ್ಟೊಂದು ಹದಗೆಟ್ಟಿದೆ ಅನ್ನೋದಕ್ಕೆ ಈ ಪ್ರಕರಣ ಸಾಕ್ಷಿ. ಅಂದು ಆ ಕಾಶ್ಮೀರಿ ವಿದ್ಯಾರ್ಥಿಗಳು ಭಾರತದ ಬಗ್ಗೆ ಏನು ಹೇಳಿದ್ದರು ವೀಡಿಯೋ ನೋಡಿ,