ಅತ್ಯಾಚಾರಿಗಳಿಗೆ ಗಲ್ಲು ಶಿಕ್ಷೆ! ಪೋಲೀಸ್ ಠಾಣೆಯಲ್ಲಿ ದೀಪ ಹಚ್ಚಿ, ಪಟಾಕಿ ಸಿಡಿಸಿ ದೀಪಾವಳಿ ಸಂಭ್ರಮ, ಎಲ್ಲಿ ಗೊತ್ತೇ?

ಅತ್ಯಾಚಾರ ಆರೋಪಿಗಳಿಗೆ ಮರಣದಂಡನೆ ಶಿಕ್ಷೆ ವಿಧಿಸಿದ್ದಕ್ಕೆ ಇಡೀ ಪೋಲೀಸ್ ಠಾಣೆಯನ್ನು ದೀಪಗಳಿಂದ ಅಲಂಕರಿಸಿ ಹಬ್ಬದಂತೆ ಸಂಭ್ರಮಿಸಿದ ಘಟನೆ ಮಹರಾಷ್ಟ್ರದ ಬುಲ್ಖಾನದಲ್ಲಿ ನಡೆದಿದೆ. ಅಪ್ರಾಪ್ತ ವಯಸ್ಸಿನ ಬಾಲಕಿಯ ಮೇಲೆ ಅತ್ಯಾಚಾರ ಎಸಗಿದ್ದ ಇಬ್ಬರು ಆರೋಪಿಗಳಿಗೆ ಕೋರ್ಟ್‌ ಗಲ್ಲು ಶಿಕ್ಷೆ ವಿಧಿಸುತ್ತಿದ್ದಂತೆಯೇ ಪೊಲೀಸ್‌ ಠಾಣೆಯಲ್ಲಿ ಹಬ್ಬದ ವಾತಾವರಣ ನಿರ್ಮಾಣವಾಗಿತ್ತು.

ಪೋಲೀಸ್ ಠಾಣೆಯನ್ನು ದೀಪಗಳಿಂದ ಅಲಂಕರಿಸಿ ಹಬ್ಬದಂತೆ ಕಂಗೊಳಿಸುವಂತೆ ಮಾಡಲಾಗಿತ್ತು. ಅತ್ಯಾಚಾರ ಆರೋಪಿಗಳಾದ ಸಾಗರ್ ಮತ್ತು ನಿಖಿಲ್‌ಗೆ ಇಲ್ಲಿನ ಸೆಷನ್ಸ್ ಕೋರ್ಟ್ ಮರಣದಂಡನೆ ಶಿಕ್ಷೆ ವಿಧಿಸಿದ್ದು, ಇದರ ಸಂಭ್ರಮಾಚರಣೆ ಠಾಣೆಯಲ್ಲಿ ನಡೆದಿತ್ತು.

ಕಳೆದ ವರ್ಷ ಏಪ್ರಿಲ್ 26ರಂದು ಈ ಇಬ್ಬರು ಸೇರಿ ಅಪ್ರಾಪ್ತ ವಯಸ್ಸಿನ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ ಮಾಡಿದ್ದರು. ಈ ಬಗ್ಗೆ ಅತ್ಯಾಚಾರ ಸಂತ್ರಸ್ತೆಯ ತಂದೆ ಚಿಕ್ಲಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು. ದೂರಿನನ್ವಯ ತಕ್ಷಣವೇ ಕಾರ್ಯೋನ್ಮುಖರಾಗಿದ್ದ ಪೊಲೀಸರು ಆರೋಪಿಗಳಿಗಾಗಿ ಬಲೆ ಬೀಸಿ, ಶೀಘ್ರದಲ್ಲಿ ಬಂಧಿಸುವಲ್ಲಿ ಯಶಸ್ವಿಯಾಗಿದ್ದರು.

Sponsored Ads


Continue Reading

ಸುದೀರ್ಘ ವಿಚಾರಣೆ ನಡೆಸಿದ ನ್ಯಾಯಾಲಯ ಭಾರತೀಯ ದಂಡ ಸಂಹಿತೆ (ಐಪಿಸಿ) ಮತ್ತು ಪೋಕ್ಸೊ (ಲೈಂಗಿಕ ಅಪರಾಧಗಳಿಂದ ಮಕ್ಕಳ ರಕ್ಷಣೆ) ಕಾಯ್ದೆಯ ಸೆಕ್ಷನ್ 376 ರ ಅಡಿ ಇಬ್ಬರು ಆರೋಪಿಗಳಿಗೆ ಗಲ್ಲುಶಿಕ್ಷೆ ಘೋಷಿಸಿತು.

ಇದರಿಂದ ಸಂತ್ರಸ್ತೆಯ ಕುಟುಂಬಸ್ಥರಿಗೆ ನ್ಯಾಯ ದೊರಕಿಸಿ ಕೊಟ್ಟ ಖುಷಿಯಲ್ಲಿ ಪೊಲೀಸರು, ಪೊಲೀಸ್ ಠಾಣೆಯನ್ನು ಸಿಂಗರಿಸಿ, ಠಾಣೆಯ ಮುಂದೆ ಪಟಾಕಿ ಸಿಡಿಸಿ, ಸಿಹಿ ಹಂಚಿ ಸಂಭ್ರಮಿಸಿದ್ದಾರೆ. ತೀರ್ಪಿನ ವಿರುದ್ಧ ಹೈಕೋರ್ಟ್‌ನಲ್ಲಿ ಮೇಲ್ಮನವಿ ಸಲ್ಲಿಸಲು ಅಪರಾಧಿಗಳಿಗೆ ಇನ್ನೂ ಸಮಯ ಇರುವುದರಿಂದ ಅವರ ಗಲ್ಲಿಗೇರಿಸುವ ದಿನಾಂಕವನ್ನು ನ್ಯಾಯಾಲಯ ನಿಗದಿಪಡಿಸಿಲ್ಲ.
أحدث أقدم