ಪಾದರಾಯನಪುರದ ಗೂಂಡಾಗಳಲ್ಲಿ ಇಬ್ಬರಿಗೆ ಕರೋನಾ ಸೋಂಕು ದೃಢ, ಕುಮಾರಸ್ವಾಮಿ ಏನಂದ್ರು ನೋಡಿ

ಪಾದರಾನಪುರ ಗಲಭೆಯಲ್ಲಿ ಬಂಧಿತರಾಗಿ ಸದ್ಯ ರಾಮನಗರ ಜೈಲಿನಲ್ಲಿರುವ ಪಾದರಾಯನಪುರದ ಕೈದಿಗಳ ಪೈಕಿ ಇಬ್ಬರಿಗೆ ಕೊರೊನಾ ಸೋಂಕು ಬಂದಿದೆ ಎಂದು ಮಾಜಿ ಸಿಎಂ ಎಚ್‍ಡಿ ಕುಮಾರಸ್ವಾಮಿ ಹೇಳಿದ್ದಾರೆ.

ಕೈದಿಗಳಲ್ಲಿ ಸೋಂಕು ದೃಢವಾಗುತ್ತಿದ್ದಂತೆ ಆರೋಗ್ಯ ಇಲಾಖೆ ಭೀತಿಗೊಂಡಿದ್ದು, ಇಬ್ಬರನ್ನು ಪರೀಕ್ಷೆಗೆ ಒಳಪಡಿಸಿ ಕ್ವಾರಂಟೈನ್ ಮಾಡಲಾಗಿದೆ. ತುರ್ತು ಅವಶ್ಯಕತೆ ಇದ್ದರೆ ಬೆಂಗಳೂರಿಗೆ ಶಿಫ್ಟ್ ಮಾಡುವ ಸಾಧ್ಯತೆಯಿದೆ. ಈಗಾಗಲೇ ಆರೋಗ್ಯ ಅಧಿಕಾರಿಗಳು ಜೈಲಿಗೆ ಭೇಟಿ ನೀಡಿದ್ದು ಎಲ್ಲರನ್ನು ಪರೀಕ್ಷೆಗೆ ಒಳಪಡಿಸಲು ಮುಂದಾಗಿದ್ದಾರೆ ಎನ್ನುವ ಮಾಹಿತಿ ಲಭ್ಯವಾಗಿದೆ.
ಈಗ ಆರೋಪಿಗಳನ್ನು ಬಂಧಿಸಿದ್ದ ಪೊಲೀಸರನ್ನು ಕ್ವಾರಂಟೈನ್ ಮಾಡಲಾಗಿದೆ. ಜೈಲಿಗೆ ಬಿಡುವಾಗ ಆರೋಪಿಗಳ ಜೊತೆಯಲ್ಲಿ ಇದ್ದ ಹಿನ್ನೆಲೆಯಲ್ಲಿ ಎಲ್ಲ ಪೊಲೀಸರನ್ನು ಕ್ವಾರಂಟೈನ್ ಮಾಡಲಾಗಿದೆ.
ಸರಣಿ ಟ್ವೀಟ್ ಗಳಲ್ಲಿ ಕುಮಾರಸ್ವಾಮಿ ಏನಂದ್ರು:
೧)ರಾಮನಗರ ಕಾರಾಗೃಹದಲ್ಲಿ ಇರಿಸಲಾಗಿದ್ದ ಪಾದರಾಯನಪುರದ ಗಲಭೆಕೋರರ ಪೈಕಿ ಇಬ್ಬರಿಗೆ ಕೊರೋನಾ ವೈರಸ್ ತಗುಲಿರುವ ಪಾಸಿಟಿವ್ ವರದಿ ಬಂದಿದೆ. ರಾಮನಗರ ಜೈಲಿನಲ್ಲಿ ಇರಿಸಲಾಗಿರುವ ಕೈದಿಗಳನ್ನು ಸಕಲ ಮುನ್ನೆಚ್ಚರಿಕೆ ಕ್ರಮಗಳೊಂದಿಗೆ ತಕ್ಷಣವೇ ಸ್ಥಳಾಂತರಿಸದಿದ್ದರೆ ನಾಳೆಯಿಂದ ಉಗ್ರ ಪ್ರತಿಭಟನೆ ಮಾಡುತ್ತೇನೆ.

೨)ಈ ಹಿಂದೆಯೇ ನಾನು ಇದೇ ವಿಷಯವಾಗಿ ಸರ್ಕಾರದ ಗಮನ ಸೆಳೆದರೂ ನಿರ್ಲಕ್ಷಿಸಿದರ ಫಲವಾಗಿ ಇಂದು ರಾಮನಗರಕ್ಕೂ ಕೊರೋನಾ ವೈರಸ್ ವಕ್ಕರಿಸಿದೆ. ಪಾಸಿಟಿವ್ ಬಂದ ಇಬ್ಬರ ಜತೆಯಲ್ಲಿದ್ದ ಏಳೆಂಟು ಮಂದಿಯನ್ನು ಕ್ವಾರಂಟೈನ್ಗೆ ಕರೆದೊಯ್ಯಲಾಗಿದೆ.

೩)ಸರ್ಕಾರ ತಡಮಾಡದೆ ರಾಮನಗರ ಜೈಲಿನಲ್ಲಿರುವ ಕೈದಿಗಳನ್ನು ಕೂಡಲೇ ಸ್ಥಳಾಂತರ ಮಾಡಬೇಕು ಸರ್ಕಾರದ ಅವಿವೇಕದ ನಿರ್ಧಾರದಿಂದಾಗಿ ರಾಮನಗರ ಜಿಲ್ಲೆಯ ಜನ ಭೀತಿಗೊಂಡಿದ್ದಾರೆ. ಇದನ್ನು ಇನ್ನೂ ಸಹಿಸಲು ಸಾಧ್ಯವಿಲ್ಲ.

೪)ಈಗಾಗಲೇ ರಾಜ್ಯದಲ್ಲಿ 445 ಮಂದಿ ಸೋಂಕಿಗೆ ತುತ್ತಾಗಿ, 17 ಮಂದಿ ಪ್ರಾಣವನ್ನೂ ಕಳೆದುಕೊಂಡಿದ್ದಾರೆ. ಎಂಟು ಜಿಲ್ಲೆಗಳು ಮಾತ್ರ ಸೋಂಕು ಮುಕ್ತವಾಗಿವೆ. ಅವುಗಳಲ್ಲಿ ರಾಮನಗರವೂ ಒಂದು. ಇದೀಗ ಸರ್ಕಾರ ತೆಗೆದುಕೊಂಡ ಎಡವಟ್ಟು ನಿರ್ಧಾರದಿಂದ ರಾಮನಗರದಲ್ಲೂ ಸೋಂಕು ಹರಡುವ ಭೀತಿ ಎದುರಾಗಿದೆ.

೫)ಸರ್ಕಾರ ಸಕಲ ಮುನ್ನೆಚ್ಚರಿಕೆಯಿಂದ ಪರಿಸ್ಥಿತಿ ನಿಭಾಯಿಸದಿದ್ದರೆ ಉಗ್ರ ಹೋರಾಟ ಮಾಡಬೇಕಾಗುತ್ತದೆ. ರಾಮನಗರ ಜೈಲ್ ಅನ್ನು ಸಂಪೂರ್ಣ ಕ್ವಾರಂಟೈನ್ ಮಾಡಬೇಕು. ಪೊಲೀಸರು ಸೇರಿದಂತೆ ಜೈಲಿನಲ್ಲಿ ಕಾರ್ಯನಿರ್ವಹಿಸಿದ ಅಡುಗೆ ಮತ್ತು ಸ್ವಚ್ಛತೆ ಯವರು ಸಂಬಂಧಿಸಿದವರ ಆರೋಗ್ಯ ಕಾಪಾಡಲು ಸರ್ಕಾರ ತಕ್ಷಣವೇ ಕಾರ್ಯೋನ್ಮುಖವಾಗಬೇಕು, ಎಂದು ಹೇಳಿದ್ದಾರೆ.

ಪಾದರಾಯನಪುರದ ಗೂಂಡಾಗಳಲ್ಲಿ ಇಬ್ಬರಿಗೆ ಕರೋನಾ ಸೋಂಕು ದೃಢ, ವೀಡಿಯೋ ನೋಡಿ

Watch Video


Previous Post Next Post