fbpx

ಅಮಿತಾಬ್ ಬಚ್ಚನ್ ಮತ್ತು ಅಭಿಷೇಕ್ ಬಚ್ಚನ್ ಗೂ ಕಿಲ್ಲರ್ ಕೊರೋನಾ ಸೋಂಕು ದೃಢ

ದೇಶಾದ್ಯಂತ ಮಹಾಮಾರಿ ಕೊರೊನಾ ಅಟ್ಟಹಾಸ ಜೋರಾಗಿದ್ದು, ಅದರಲ್ಲೂ ಮಹಾರಾಷ್ಟ್ರದಲ್ಲಿ ಇದರ ಮೀತಿ ಈಗಾಗಲೇ ಹೆಚ್ಚು ಕ್ರೂರತೆ ಪಡೆದುಕೊಂಡಿದೆ. ಇದರ ಮಧ್ಯೆ ಬಾಲಿವುಡ್ನ ಬಿಗ್ ಬಿ ಅಮಿತಾಬ್ ಬಚ್ಚನ್ ಹಾಗೂ ಅವರ ಮಗ ಅಭಿಷೇಕ್ ಬಚ್ಚನ್ಗೂ ಕೊರೊನಾ ಸೋಂಕು ಇರುವುದು ದೃಢಪಟ್ಟಿದೆ.

ಅನಾರೋಗ್ಯದ ಕಾರಣ ಇಲ್ಲಿನ ನಾನಾವತಿ ಆಸ್ಪತ್ರೆಗೆ ದಾಖಲು ಮಾಡಿದಾಗ ಅಮಿತಾಬ್ ಬಚ್ಚನ್ ಅವರಿಗೆ ಕೊರೊನಾ ಇರುವುದು ದೃಢಪಟ್ಟಿದ್ದು, ಇದಕ್ಕೆ ಸಂಬಂಧಿಸಿದಂತೆ ಅವರು ಟ್ವೀಟ್ ಮಾಡಿ ಮಾಹಿತಿ ಹೊರಹಾಕಿದ್ದಾರೆ. ಇದೇ ವೇಳೆ ಕಳೆದ 10 ದಿನಗಳಿಂದ ತಮ್ಮ ಸಂಪರ್ಕಕ್ಕೆ ಬಂದಿರುವ ಎಲ್ಲ ವ್ಯಕ್ತಿಗಳು ಕೊರೊನಾ ಟೆಸ್ಟ್ ಮಾಡಿಸಿಕೊಳ್ಳುವಂತೆ ಮನವಿ ಮಾಡಿದ್ದಾರೆ.


ನನಗೆ ಕೋವಿಡ್-19 ಪಾಸಿಟಿವ್ ದೃಢಪಟ್ಟಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ. ಕುಟುಂಬಸ್ಥರು ಹಾಗೂ ಸಿಬ್ಬಂದಿ ವರ್ಗಕ್ಕೂ ಪರೀಕ್ಷೆ ನಡೆಸಲಾಗುತ್ತಿದ್ದು, ಅದರ ಫಲಿತಾಂಶ ಬರಬೇಕಾಗಿದೆ. ಕಳೆದ 10 ದಿನಗಳಿಂದ ನನ್ನ ಸಂಪರ್ಕಕ್ಕೆ ಬಂದ ಎಲ್ಲರೂ ಪರೀಕ್ಷೆ ಮಾಡಿಸಿಕೊಳ್ಳಿ ಎಂದಿದ್ದಾರೆ.

ಇನ್ನು ತಮಗೆ ಕೊರೊನಾ ಸೋಂಕು ತಗುಲಿರುವ ವಿಷಯವನ್ನ ಅಭಿಷೇಕ್ ಬಚ್ಚನ್ ಕೂಡ ಟ್ವೀಟ್ ಮೂಲಕ ಹೊರಹಾಕಿದ್ದು, ಇಂದು ಬೆಳಗ್ಗೆ ನನಗೆ ಹಾಗೂ ತಂದೆಗೆ ಕೊರೊನಾ ಇರುವುದು ದೃಢಪಟ್ಟಿದೆ. ಸೋಂಕಿನ ಲಕ್ಷಣ ಕಾಣಿಸಿಕೊಂಡಿರುವ ಕಾರಣ ಆಸ್ಪತ್ರೆಗೆ ದಾಖಲಾಗಿದ್ದೇವೆ. ಈಗಾಗಲೇ ಸಂಬಂಧಪಟ್ಟ ಅಧಿಕಾರಿಗಳಿಗೆ ಮಾಹಿತಿ ನೀಡಿದ್ದು, ನಮ್ಮ ಕುಟುಂಬ ಹಾಗೂ ಮನೆಯಲ್ಲಿರುವ ಸಿಬ್ಬಂದಿಗೆ ಕೋವಿಡ್ ಟೆಸ್ಟ್ ಮಾಡಲಾಗುತ್ತಿದೆ ಎಂದು ಬರೆದುಕೊಂಡಿದ್ದಾರೆ.


ಇಂದು ಬೆಳಗ್ಗೆ ನನಗೆ ಹಾಗೂ ತಂದೆಗೆ ಕೊರೊನಾ ಇರುವುದು ದೃಢಪಟ್ಟಿದೆ. ಸೋಂಕಿನ ಲಕ್ಷಣ ಕಾಣಿಸಿಕೊಂಡಿರುವ ಕಾರಣ ಆಸ್ಪತ್ರೆಗೆ ದಾಖಲಾಗಿದ್ದೇವೆ. ಈಗಾಗಲೇ ಸಂಬಂಧಪಟ್ಟ ಅಧಿಕಾರಿಗಳಿಗೆ ಮಾಹಿತಿ ನೀಡಿದ್ದು, ನಮ್ಮ ಕುಟುಂಬ ಹಾಗೂ ಮನೆಯಲ್ಲಿರುವ ಸಿಬ್ಬಂದಿಗೆ ಕೋವಿಡ್ ಟೆಸ್ಟ್ ಮಾಡಲಾಗುತ್ತಿದೆ ಎಂದು ಅಭಿಷೇಕ್ ಬಚ್ಚನ್ ಟ್ವೀಟ್ ಮಾಡಿದ್ದಾರೆ.

error: Content is protected !!