ದರ್ಶನ್ ವಿರುದ್ಧ ಅಪ್ಪು ಫ್ಯಾನ್ಸ್ ಆಕ್ರೋಶ ಹೆಚ್ಚಾಗುತ್ತಲೇ ಇದೆ. ಸಾಮಾಜಿಕ ಜಾಲತಾಣದಲ್ಲಿ ಅಪ್ಪು ಅಭಿಮಾನಿಗಳು ದರ್ಶನ್ ಅವರನ್ನು ತರಾಟೆಗೆ ತೆಗೆದುಕೊಳ್ಳುತ್ತಾ ಇದ್ದಾರೆ. ದರ್ಶನ್ ಅಭಿನಯದ ಕ್ರಾಂತಿ ಚಿತ್ರ ಬಿಡುಗಡೆಗೆ ತಡೆಯೊಡ್ಡುವ ಬಗ್ಗೆ ಆಕ್ರೋಶ ಹೊರಹಾಕುತ್ತಿದ್ದಾರೆ.
ಇದಕ್ಕೆಲ್ಲ ಕಾರಣ ದರ್ಶನ್ ನೀಡಿದ ಆ ಒಂದು ಹೇಳಿಕೆ. ಕ್ರಾಂತಿ ಚಿತ್ರದ ಸಂದರ್ಶನದಲ್ಲಿ ತಮ್ಮ ಅಭಿಮಾನಿಗಳ ಬಗ್ಗೆ ಮಾತನಾಡುತ್ತಾ, ‘ಸಹಜವಾಗಿ ನಾವು ಸತ್ತಮೇಲೆ ನೋಡಿದ್ದೇವೆ. ಫ್ಯಾನ್ಸ್‌ಗಳು ಅಂದ್ರೆ ಹೇಗೆ ಎಂದು ಪುನೀತ್ ರಾಜ್‌ಕುಮಾರ್ ಒಬ್ಬರದ್ದೇ ಸಾಕು. ಆದ್ರೆ ನಾನು ಬದುಕಿದ್ದಾಗಲೇ ಫ್ಯಾನ್ಸ್‌ಗಳು ತೋರಿಸಿ ಬಿಟ್ಟರಲ್ಲ ನನಗೆ ಅಷ್ಟೇ ಸಾಕು’. ಎಂದು ದರ್ಶನ್ ಹೇಳಿದ್ದಾರೆ.
ದರ್ಶನ್ ಅವರ ಈ ಹೇಳಿಕೆ ಅಪ್ಪು ಅಭಿಮಾನಿಗಳನ್ನು ಕೆರಳಿಸಿದ್ದು, ದರ್ಶನ್ ವಿರುದ್ಧ ತಿರುಗಿಬಿದ್ದಿದ್ದಾರೆ. ನಟ ದರ್ಶನ್ ತಮ್ಮ ಸಂದರ್ಶನದಲ್ಲಿ ಪುನೀತ್ ರಾಜ್‌ಕುಮಾರ್ ಹೆಸರನ್ನು ಪ್ರಸ್ತಾಪ ಮಾಡುತ್ತಲೇ, ಪುನೀತ್ ರಾಜ್‌ಕುಮಾರ್ ಅಭಿಮಾನಿಗಳು ಸೋಶಿಯಲ್ ಮೀಡಿಯಾದಲ್ಲಿ ಈ ಬಗ್ಗೆ ವಿರೋಧ ವ್ಯಕ್ತಪಡಿಸುತ್ತಿದ್ದಾರೆ. ದರ್ಶನ್ ಅಪ್ಪು ಅಭಿಮಾನಿಗಳ ಕ್ಷಮೆ ಕೇಳದೆ ಹೋದರೆ ಕ್ರಾಂತಿ ಸಿನಿಮಾ ಬಿಡುಗಡೆಗೆ ತಡೆಯೊಡ್ಡುವ ಬೆದರಿಕೆ ಹಾಕಿದ್ದಾರೆ.