ದೇಶದಾದ್ಯಂತ ಹಿಂದೂ ಸಂಘಟನೆ ಕಾರ್ಯಕರ್ತರ ಮೇಲಿನ ದಾಳಿ ಮುಂದುವರೆದಿದೆ. ಕೆಲ ದಿನಗಳ ಹಿಂದಷ್ಟೇ ಕರ್ನಾಟಕದ ಕರಾವಳಿಯಲ್ಲಿ ಮತಾಂಧರ ಗುಂಪೊಂದು ಬಿಜೆಪಿ ಯುವ ನಾಯಕನನ್ನು ಭೀಕರವಾಗಿ ಹತ್ಯೆಗೈದಿತ್ತು.
ಇದೀಗ ಮಹಾರಾಷ್ಟ್ರದ ಅಹ್ಮದ್ ನಗರದಲ್ಲಿ ಹಿಂದೂ ಯುವಕನ ಮೇಲೆ ಇಪ್ಪತ್ತಕ್ಕೂ ಹೆಚ್ಚು ಜನರ ಗುಂಪು ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿದ ಬಗ್ಗೆ ವರದಿಯಾಗಿದೆ. ಘಟನೆಯಲ್ಲಿ ಪ್ರತೀಕ್ ಅಲಿಯಾಸ್ ಸನ್ನಿ ರಾಜೇಂದ್ರ ಪವಾರ್ (23) ಗಂಭೀರವಾಗಿ ಗಾಯಗೊಂಡಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆ. ಆಗಸ್ಟ್ 4ರಂದು ಈ ಘಟನೆ ನಡೆದಿದ್ದು, ಘಟನೆಗೆ ಸಂಬಂಧಿಸಿ ಮಹಾರಾಷ್ಟ್ರ ಪೊಲೀಸರು 4 ಆರೋಪಿಗಳನ್ನು ಬಂಧಿಸಿದ್ದಾರೆ.
ಬಿಜೆಪಿ ಮಾಜಿ ನಾಯಕಿ ನೂಪುರ್ ಶರ್ಮಾ ಅವರನ್ನು ಬೆಂಬಲಿಸಿ ಪೋಸ್ಟ್ ಹಾಕಿದ್ದಕ್ಕೆ ಈ ದಾಳಿ ನಡೆದಿದೆ ಎಂದು ತಿಳಿದುಬಂದಿದ್ದು, ದುಷ್ಕರ್ಮಿಗಳ ದಾಳಿಯಿಂದ ಪ್ರತೀಕ್‍ನ ತಲೆ ಮತ್ತು ದೇಹದ ಇತರ ಭಾಗಗಳಿಗೆ ಗಂಭೀರ ಗಾಯಗಳಾಗಿದ್ದು, ಐಸಿಯುನಲ್ಲಿ ಆತನನ್ನು ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
