ಸ್ವಾತಂತ್ರ್ಯದ ಅಮೃತ ಮಹೋತ್ಸವ ಅಂಗವಾಗಿ ಶಿವಮೊಗ್ಗದ ಮಾಲ್ ಒಂದರಲ್ಲಿ ಅಳವಡಿಸಲಾಗಿದ್ದ ಸ್ವಾತಂತ್ರ್ಯ ಹೋರಾಟಗಾರ ವೀರ ಸಾವರ್ಕರ್ ಅವರ ಪೋಟೋವನ್ನು ಕೆಲ ಮತಾಂಧ ಶಕ್ತಿಗಳು ತೆರವುಗೊಳಿಸಿದ್ದವು.
ಇದೀಗ ಇದಕ್ಕೆ ಪ್ರತೀಕಾರವಾಗಿ ಹಿಂದೂ ಸಂಘಟನೆ ಕಾರ್ಯಕರ್ತರು ಟಿಪ್ಪು ಸುಲ್ತಾನ್ ಬ್ಯಾನರ್‌ಗಳನ್ನು ಹರಿದು ಹಾಕಿ ಆಕ್ರೋಶ ವ್ಯಕ್ತಪಡಿಸಿದೆ. ಕಾಂಗ್ರೆಸ್ ಅಳವಡಿಸಿದ್ದ ಟಿಪ್ಪುವಿನ ಬ್ಯಾನರನ್ನು ಹಿಂದೂ ಕಾರ್ಯಕರ್ತ ಪುನೀತ್ ಕೆರೆಹಳ್ಳಿ ಹಾಗೂ ಸಹಚರರು ರಾತ್ರೋರಾತ್ರಿ ಹರಿದು ಹಾಕಿದ್ದಾರೆ.
ಈ ಸಂದರ್ಭದಲ್ಲಿ ಮಾತನಾಡಿದ ಪುನೀತ್ ಕೆರೆಹಳ್ಳಿ, ‘ಸ್ವಾತಂತ್ರ್ಯ ಹೋರಾಟದ ಸಂದರ್ಭದಲ್ಲಿ ಎರಡು ಬಾರಿ ಕರಿನೀರಿನ ಜೈಲು ಶಿಕ್ಷೆ ಅನುಭವಿಸಿದ ವೀರ ಸಾವರ್ಕರ್ ಬ್ಯಾನರ್ ಅನ್ನು ಶಿವಮೊಗ್ಗದಲ್ಲಿ ಹರಿದು ಹಾಕಲಾಗಿದೆ.
ಇದಕ್ಕೆ ಪ್ರತೀಕಾರವಾಗಿ ನಾವು ಇಲ್ಲಿ ಟಿಪ್ಪು ಬ್ಯಾನರ್ ಹರಿದು ಹಾಕಿದ್ದೇವೆ. ಟಿಪ್ಪು ಸ್ವಾತಂತ್ರ್ಯ ಹೋರಾಟಗಾರ ಅಲ್ಲ ಎಂದು ಹೈಕೋರ್ಟ್ ಕೂಡ ಹೇಳಿದೆ. ಹೀಗಾಗಿ ಟಿಪ್ಪು ಬದಲಾಗಿ ನೈಜ ಸ್ವಾತಂತ್ರ್ಯ ಹೋರಾಟಗಾರರಾದ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ, ಕಿತ್ತೂರು ರಾಣಿ ಚೆನ್ನಮ್ಮ ಅವರ ಭಾವಚಿತ್ರವನ್ನು ಹಾಕಿ’ ಎಂದು ಹೇಳಿದ್ದಾರೆ.
