fbpx

Please assign a menu to the primary menu location under menu

ಕಾಬೂಲ್ ಗುರುದ್ವಾರದ ಮೇಲೆ ನಡೆದ ಉಗ್ರರ ದಾಳಿಯಲ್ಲಿ ಕಾಸರಗೋಡಿನ ಸೂಸೈಡ್ ಬಾಂಬರ್ ಭಾಗಿ, ಯಾರೀತ ಗೊತ್ತೇ?

ಇತ್ತೀಚೆಗೆ ಕಾಬೂಲ್‍ನಲ್ಲಿ ನಡೆದ ಸಿಖ್‍ರ ಮೇಲಿನ ದಾಳಿಯಲ್ಲಿ ಭಾಗಿಯಾಗಿದ್ದ ನಾಲ್ಕು ಜನ ಭಯೋತ್ಪಾದಕರಲ್ಲಿ ಓರ್ವ ಕೇರಳದ ಕಾಸರಗೋಡಿನ ಯುವಕನಿದ್ದ ಎಂದು ವರದಿಯಾಗಿದೆ.

ಮಾರ್ಚ್ 25ರಂದು ಕಾಬೂಲ್‍ನ ಗುರುದ್ವಾರದಲ್ಲಿ ಪ್ರಾರ್ಥನೆ ಸಲ್ಲಿಸಲು ಬಂದಿದ್ದ ಸಿಖ್‍ರ ಮೇಲೆ ಆತ್ಮಾಹುತಿ ಬಾಂಬ್ ದಾಳಿ ಮಾಡಲಾಗಿತ್ತು. ಈ ದಾಳಿಯಲ್ಲಿ ನಾಲ್ಕು ಜನ ಸೂಸೈಡ್ ಬಾಂಬರ್ ಗಳು ಭಾಗಿಯಾಗಿದ್ದಾರೆ ಎಂದು ತಿಳಿದು ಬಂದಿತ್ತು. ಈಗ ಇದರಲ್ಲಿ ಓರ್ವ ಭಾರತದ ಮೂಲದವನಾಗಿದ್ದು, ಕೇರಳದಿಂದ 4 ವರ್ಷದ ಹಿಂದೆ 14 ಜನರೊಂದಿಗೆ ಕಾಣೆಯಾಗಿದ್ದನು.

ಕಳೆದ ಬುಧವಾರ ಕಾಬೂಲ್‍ನ ಸಿಖ್ ದೇಗುಲದ ಮೇಲೆ ದಾಳಿ ನಡೆಸಿದ ನಾಲ್ಕು ಸದಸ್ಯರ ತಂಡದ ಭಾಗವಾಗಿದ್ದ ಆತ್ಮಾಹುತಿ ದಾಳಿಕೋರ ಅಬು ಖಾಲಿದ್ ಅಲ್-ಹಿಂದಿ ಫೋಟೋವನ್ನು ಇಸ್ಲಾಮಿಕ್ ಸ್ಟೇಟ್ ಶುಕ್ರವಾರ ಪ್ರಕಟಿಸಿದೆ. ಉನ್ನತ ಮೂಲಗಳ ಪ್ರಕಾರ ಈತ ಕೇರಳದ ಕಾಸರಗೋಡಿನ ಪಾಡ್ನೆ ಪ್ರದೇಶದಲ್ಲಿ ಅಂಗಡಿ ಇಟ್ಟುಕೊಂಡಿದ್ದ ಮೊಹಮ್ಮದ್ ಸಾಜಿದ್ ಕುಥಿರುಮಾಲ್ ಎಂದು ತಿಳಿದು ಬಂದಿದೆ. 2016ರ ಎನ್‍ಐಎ ಪ್ರಕರಣದಲ್ಲಿ ಆತನನ್ನು ಬಂಧಿಸಲಾಗಿತ್ತು ಮತ್ತು ಆತನ ವಿರುದ್ಧ ಇಂಟರ್‍ಪೋಲ್ ರೆಡ್ ನೋಟಿಸ್ ಜಾರಿಗೊಳಿಸಿತ್ತು.

error: Content is protected !!