ಕೊಡಗಿನ ವಿರಾಜಪೇಟೆಯ ಮೂಲಕ ಕೇರಳವನ್ನು ಸಂಪರ್ಕಿಸುವ ರಸ್ತೆಯನ್ನು ಬಂದ್ ಮಾಡಿರುವುದರ ಬಗ್ಗೆ ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್, ಕರ್ನಾಟಕ ಸರ್ಕಾರದ ವಿರುದ್ಧ ಪ್ರಧಾನಿ ಮೋದಿಗೆ ಪತ್ರವನ್ನು ಬರೆದಿದ್ದಾರೆ.
ಕೊಡಗಿನ ವಿರಾಜಪೇಟೆಯ ಮೂಲಕ ಕೇರಳ ಸಂಪರ್ಕಿಸುವ ರಸ್ತೆಯನ್ನು ಬಂದ್ ಮಾಡಿರೋದರಿಂದ ಕೇರಳಕ್ಕೆ ಅಗತ್ಯ ವಸ್ತುಗಳ ಪೂರೈಕೆ ಮಾಡಲು ತೊಂದರೆಯಾಗುತ್ತಿದೆ. ತಕ್ಷಣ ರಸ್ತೆಯನ್ನು ತೆರವುಗೊಳಿಸಿ ಎಂದು ಪತ್ರದಲ್ಲಿ ಮನವಿ ಮಾಡಿದ್ದಾರೆ.
ಆದರೆ ಕೊಡಗಿನ ನಿವಾಸಿಗಳು ಇದಕ್ಕೆ ವಿರೋಧ ವ್ಯಕ್ತಪಡಿಸುತ್ತಿದ್ದು, ಕೇರಳ ಈಗಾಗಲೇ ಕೊರೋನಾ ವೈರಸ್ ಹಾಟ್ ಸ್ಪಾಟ್ ಆಗಿದ್ದು, ಯಾವುದೇ ಕಾರಣಕ್ಕೂ ರಸ್ತೆ ತೆರವುಗೊಳಿಸಲು ಬಿಡಲ್ಲ ಎಂದಿದ್ದಾರೆ. ಇಲ್ಲಿದೆ ನೋಡಿ ವೀಡಿಯೋ,