fbpx

ಭಾರತೀಯ ಸೇನೆಯಿಂದ ಮುಂದುವರೆದ ಉಗ್ರರ ಬೇಟೆ, 24ಗಂಟೆಯಲ್ಲಿ 9 ಜಿಹಾದಿಗಳು ಮಟಾಶ್

ಜಮ್ಮು ಮತ್ತು ಕಾಶ್ಮೀರದಲ್ಲಿ ಕಳೆದ 24 ಗಂಟೆಗಳಲ್ಲಿ ಒಂಬತ್ತು ಭಯೋತ್ಪಾದಕರು ಹತರಾಗಿದ್ದಾರೆ ಎಂದು ಭಾರತೀಯ ಸೇನೆಯು ಭಾನುವಾರ ಮಾಹಿತಿ ನೀಡಿದೆ. ಅದಾಗ್ಯೂ, ಈ ಕಾರ್ಯಾಚರಣೆಯಲ್ಲಿ ಭಾರತೀಯ ಸೇನೆಯ ಓರ್ವ ಸೈನಿಕ ಹುತಾತ್ಮರಾಗಿದ್ದು, ಇಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ.

ಅಮಾಯಕ ನಾಗರಿಕರ ಹತ್ಯೆಯಲ್ಲಿ ಭಾಗಿಯಾಗಿದ್ದ ನಾಲ್ವರು ಭಯೋತ್ಪಾದಕರನ್ನು ಶನಿವಾರ ದಕ್ಷಿಣ ಕಾಶ್ಮೀರದ ಬತ್ಪುರ ಪ್ರದೇಶದಲ್ಲಿ ಹತ್ಯೆ ಮಾಡಲಾಗಿದೆ.

ಮತ್ತೊಂದೆಡೆ ಪ್ರತಿಕೂಲ ಹವಾಮಾನದ ಲಾಭವನ್ನು ಪಡೆದುಕೊಂಡು ಉತ್ತರ ಕಾಶ್ಮೀರದ ಕೇರನ್ ಸೆಕ್ಟರ್‌ನಲ್ಲಿ ಉಗ್ರರು ಒಳನುಸುಳಿದ್ದು ಇದರ ವಿರುದ್ದ ಕಾರ್ಯಾಚರಣೆ ನಡೆಸಿದ ಐವರು ಭಯೋತ್ಪಾದಕರನ್ನು ಹತ್ಯೆ ಮಾಡಿದ್ದಾರೆ.
ಕಾರ್ಯಾಚರಣೆ ಇನ್ನೂ ಪ್ರಗತಿಯಲ್ಲಿದೆ.

error: Content is protected !!