ದೇಶದಲ್ಲಿ ಹಬ್ಬುತ್ತಿರುವ ಕೊರೋನಾ ವೈರಸ್ ನಿಯಂತ್ರಣಕ್ಕಾಗಿ 21 ದಿನಗಳ ಕಾಲ ಲಾಕ್ಡೌನ್ ಮಾಡಿದ್ದರೂ ಕೊರೋನಾ ಸೋಂಕು ಹತೋಟಿಗೆ ಬಾರದ ಹಿನ್ನೆಲೆಯಲ್ಲಿ ಲಾಕ್ಡೌನ್ ಅನ್ನು ಏಪ್ರಿಲ್ 14ರ ನಂತರವೂ ಮುಂದುವರೆಸುವ ಅಗತ್ಯವಿದೆ ಎಂದು ಪ್ರಧಾನಿ ಮೋದಿ ಅವರು ಹೇಳಿದ್ದಾರೆ.
ಲಾಕ್ಡೌನ್ ಘೋಷಿಸಿ 14 ದಿನಗಳು ಕಳೆದರೂ ಕೊರೋನಾ ಸೋಂಕು ನಿಯಂತ್ರಣಕ್ಕೆ ಬಾರದೆ ದಿನದಿಂದ ದಿನಕ್ಕೆ ಸೋಂಕಿತರ ಸಂಖ್ಯೆ ಮತ್ತು ಮೃತಪಡುವವರು ಸಂಖ್ಯೆ ಏರಿಕೆಯಾಗುತ್ತಲೇ ಇದೆ. ಏತನ್ಮಧ್ಯೆ, ಏಪ್ರಿಲ್ 14 ರ ನಂತರವೂ ಲಾಕ್ಡೌನ್ ಮುಂದುವರೆಸಬೇಕೇ ಬೇಡವೇ ಎಂಬ ವಿಚಾರವಾಗಿ ಪ್ರಧಾನಿ ಮೋದಿ ಅವರು ಇಂದು ಸರ್ವಪಕ್ಷಗಳ ಸಭೆ ನಡೆಸಿದರು. ಸದ್ಯದ ಪರಿಸ್ಥಿತಿಯಲ್ಲಿ ಲಾಕ್ಡೌನ್ ಮುಂದುವರೆಸುವುದು ಅತ್ಯಗತ್ಯ ಎಂದು ಪ್ರಧಾನಿ ಮೋದಿ ಹೇಳಿದ್ದಾರೆ.