fbpx

ವೈದ್ಯರು ಪೋಲೀಸರ ಮೇಲೆ ಕಲ್ಲು ತೂರಿದವರ ಹೆಡೆಮುರಿ ಕಟ್ಟಿದ ಯೋಗಿ ಪೋಲೀಸರು, ಬಂಧಿಸುವಾಗ ಮ’ತಾಂಧರ ರೋಧನೆ ಹೇಗಿದೆ ನೋಡಿ(ವೀಡಿಯೋ)

ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಪೋಲೀಸರ ಕ್ಷಿಪ್ರ ಕಾರ್ಯಾಚರಣೆ, ಉತ್ತರಪ್ರದೇಶದ ಮೊರಾದಾಬಾದಿನಲ್ಲಿ ಕೊರೊನಾ ರೋಗಿಯನ್ನು ಕರೆದೊಯ್ಯುತ್ತಿದ್ದ ಆಂಬ್ಯುಲೆನ್ಸ್ ಹಾಗೂ ಪೋಲೀಸ್ ವಾಹನದ ಮೇಲೆ ಕಲ್ಲು ತೂರಾಟ ನಡೆಸಿ ವೈದ್ಯರು ಹಾಗೂ ಪೋಲೀಸರನ್ನು ಗಂಭೀರವಾಗಿ ಗಾಯಗೊಳಿಸಿದ್ದವರ ಬಂಧನವಾಗಿದೆ.

ಕೊರೊನಾ ಸೋಂಕಿನಿಂದಾಗಿ ಮೃತಪಟ್ಟ ವ್ಯಕ್ತಿಯ ಜತೆ ಪ್ರಾಥಮಿಕ ಸಂಪರ್ಕ ಹೊಂದಿದ್ದವರನ್ನು ಕರೆದೊಯ್ಯಲು ಬಂದಿದ್ದ ವೈದ್ಯರು ಹಾಗೂ ಪೊಲೀಸರ ಮೇಲೆ ನೂರಾರು ಜನರಿದ್ದ ಗುಂಪು ಕಲ್ಲು ತೂರಾಟ ನಡೆಸಿ ಗಾಯಗೊಳಿಸಿ, ಆಂಬುಲೆನ್ಸ್ ಹಾಗೂ ಪೊಲೀಸ್ ವಾಹನಗಳನ್ನು ಧ್ವಂಸಗೊಳಿಸಿದ್ದರು.

ಕೊರೊನಾ ಸೋಕು ವ್ಯಾಪಕವಾಗಿ ಹರಡುತ್ತಿರುವ ಹಿನ್ನೆಲೆಯಲ್ಲಿ ಉತ್ತರ ಪ್ರದೇಶದ ಪಟ್ಟಣವಾದ ಮೊರಾದಾಬಾದ್ನ ಹೃದಯಭಾಗದಲ್ಲಿರುವ ನವಾಬಪುರ ಕಾಲನಿಯನ್ನು ಸೀಲ್-ಡೌನ್ ಮಾಡಲಾಗಿದೆ. ಇಲ್ಲಿದ್ದ ವ್ಯಕ್ತಿಯೊಬ್ಬ ಕೋವಿಡ್-19 ನಿಂದಾಗಿ ಮೃತಪಟ್ಟಿದ್ದ.

ಮೃತಪಟ್ಟ ವ್ಯಕ್ತಿಯ ಕುಟುಂಬದೊಂದಿಗೆ ಪ್ರಾಥಮಿಕ ಸಂಪರ್ಕ ಹೊಂದಿದ್ದ ವ್ಯಕ್ತಿಗಳನ್ನು ಪರೀಕ್ಷೆ ನಡೆಸಿ ಕ್ವಾರಂಟೈನ್ ಗೆ ಒಳಪಡಿಸಲು ಆಂಬುಲೆನ್ ನಲ್ಲಿ ಕರೆತರಲು ವೈದ್ಯರ ತಂಡ ತೆರಳಿತ್ತು. ಜತೆಗೆ ಪೊಲೀಸ್ ಸಿಬ್ಬಂದಿ ಕೂಡ ಇದ್ದರು. ಕುಟುಂಬದ ಸದಸ್ಯರು ಆಂಬುಲೆನ್ಸ್ ಹತ್ತುತ್ತಿದ್ದಂತೆ ನೂರಾರು ಸಂಖ್ಯೆಯಲ್ಲಿ ಆಗಮಿಸಿದ ಸ್ಥಳೀಯರು ವೈದ್ಯರು ಹಾಗೂ ಪೊಲೀಸರ ಮೇಲೆ ಕಲ್ಲು ತೂರಾಟ ಆರಂಭಿಸಿದ್ದಾರೆ.

ಈ ಕಲ್ಲು ತೂರಾಟ ಘಟನೆಯಲ್ಲಿ ವಾಹನಗಳು ಜಖಂಗೊಂಡಿವೆ. ಆಂಬುಲೆನ್ಸ್ ಚಾಲಕ ಹಾಗೂ ಡಾಕ್ಟರ್ ಗೆ ತೀವ್ರವಾಗಿ ಗಾಯಗಳಾಗಿವೆ ಎಂದು ಹಿರಿಯ ಪೊಲೀಸ್ ಅಧಿಕಾರಿ ಅಮಿತ್ ಪಾಠಕ್ ಹೇಳಿದ್ದಾರೆ.

ಕೊರೋನಾ ವಾರಿಯರ್ಸ್ ಗಳ ಮೇಲೆ ಹಲ್ಲೆ ನಡೆಸುವವರ ವಿರುದ್ಧ ರಾಷ್ಟ್ರೀಯ ಭದ್ರತಾ ಕಾಯ್ದೆಯನ್ವಯ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಉತ್ರಪ್ರದೇಶ ಸಿಎಂ ಯೋಗಿ ಆದಿತ್ಯನಾಥ ಎಚ್ಚರಿಕೆ ನೀಡಿದ್ದಾರೆ. ಇದಲ್ಲದೆ, ಸಾರ್ವಜನಿಕರ ಸ್ವತ್ತುಗಳಿಗೆ ಹಾನಿ ಮಾಡಿದವರಿಂದಲೇ ನಷ್ಟವನ್ನು ಭರಿಸಲಾಗುತ್ತದೆ ಎಂದು ಸ್ಪಷ್ಟಪಡಿಸಿದ್ದಾರೆ. ವೀಡಿಯೋ ನೋಡಿ,

ಈ ಸುದ್ದಿಯನ್ನು ಶೇರ್ ಮಾಡಿ

error: Content is protected !!