fbpx

Please assign a menu to the primary menu location under menu

ಈ ಭೂಪ ಹರಿಬಿಟ್ಟ ವೀಡಿಯೋದಿಂದಾಗಿಯೆ ಮುಂಬೈನಲ್ಲಿ ಸಾವಿರಾರು ಕೂಲಿ ಕಾರ್ಮಿಕರು ರಸ್ತೆಗಿಳಿದಿದ್ದು, ಆ ವೀಡಿಯೋ ಇಲ್ಲಿದೆ ನೋಡಿ

ಮುಂಬೈನಲ್ಲಿ ಸಾವಿರಕ್ಕೂ ಅಧಿಕ ವಲಸೆ ಕಾರ್ಮಿಕರು ಪ್ರತಿಭಟನೆ ನಡೆಸಿದ್ದರು. ಲಾಕ್ ಡೌನ್ ವಿಸ್ತರಣೆ ವಿರೋಧಿಸಿ ಪ್ರತಿಭಟನೆ ನಡೆಸಲು ಪ್ರಚೋದನೆ ನೀಡಿದ ಆರೋಪದ ಮೇಲೆ ವ್ಯಕ್ತಿಯೊಬ್ಬನನ್ನು ಮುಂಬೈ ಪೊಲೀಸರು ವಶಕ್ಕೆ ಪಡೆದಿದ್ದಾರೆ.

ವಿನಯ್ ದುಬೆ ಎಂಬ ವ್ಯಕ್ತಿಯನ್ನು ಮಂಗಳವಾರ ರಾತ್ರಿ ವಶಕ್ಕೆ ಪಡೆಯಲಾಗಿದೆ. ನವಿ ಮುಂಬೈ ಮೂಲದ ವಿನಯ್ ಹಾಕಿದ ಫೇಸ್ ಬುಕ್ ಸ್ಟೇಟಸ್ ಮತ್ತು ಮಾಡಿದ ಟ್ವೀಟ್ ಕಾರ್ಮಿಕರು ಪ್ರತಿಭಟನೆ ನಡೆಸುವಂತೆ ಮಾಡಿದೆ ಎಂದು ಪೊಲೀಸರು ಹೇಳಿದ್ದಾರೆ.

ತನ್ನ ಫೇಸ್‌ ಬುಕ್‌ ಖಾತೆಯಲ್ಲಿ “ಮಹಾರಾಷ್ಟ್ರ ಸರ್ಕಾರ ವಲಸೆ ಕಾರ್ಮಿಕರಿಗೆ ಊರಿಗೆ ಹೋಗಲು ವ್ಯವಸ್ಥೆ ಮಾಡಬೇಕು” ಎಂದು ಆಗ್ರಹಿಸಿ ವೀಡಿಯೋ ಮಾಡಿ ಹಾಕಿದ್ದ ಭೂಪ, ಏಪ್ರಿಲ್ 18ರೊಳಗೆ ರೈಲುಗಳ ವ್ಯವಸ್ಥೆ ಮಾಡದಿದ್ದರೆ ವಲಸೆ ಕಾರ್ಮಿಕರು ದೇಶವ್ಯಾಪಿ ಪ್ರತಿಭಟನೆ ಆರಂಭಿಸಬೇಕು ಎಂದು ಟ್ವೀಟ್ ಕೂಡ ಮಾಡಿದ್ದ.

ಇವನ ಮಾತನ್ನು ಕೇಳಿ ಮಂಗಳವಾರ ಸಂಜೆ ಬಾಂದ್ರಾ ರೈಲು ನಿಲ್ದಾಣಕ್ಕೆ 1000ಕ್ಕೂ ಅಧಿಕ ವಲಸೆ ಕಾರ್ಮಿಕರು ಆಗಮಿಸಿದ್ದರು. ಲಾಕ್ ಡೌನ್ ನಿಯಮ ಉಲ್ಲಂಘನೆ ಮಾಡಿದ್ದರು. ಊರಿಗೆ ಹೋಗಲು ತಮಗೆ ವ್ಯವಸ್ಥೆ ಮಾಡಿಕೊಡಬೇಕು ಎಂದು ಆಗ್ರಹಿಸಿದ್ದರು.

ಪ್ರತಿಭಟನೆ ಮಾಡಿದ ಎಲ್ಲಾ ಕಾರ್ಮಿಕರು ಉತ್ತರ ಪ್ರದೇಶ, ಬಿಹಾರ, ಪಶ್ಚಿಮ ಬಂಗಾಳಕ್ಕೆ ಸೇರಿದವರು ಎಂದು ಪೊಲೀಸರು ಹೇಳಿದ್ದಾರೆ. ಕಾರ್ಮಿಕರು ನೂರಾರು ಸಂಖ್ಯೆಯಲ್ಲಿ ಹೊರಬರಲು ವಿನಯ್ ದುಬೆ ಹಾಕಿದ ಪೋಸ್ಟ್‌ಗಳೇ ಕಾರಣ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ. ಈ ಕಾರಣಕ್ಕೆ ಆತನನ್ನು ಬಂದಿಸಲಾಗಿದೆ.

Watch Video

error: Content is protected !!