fbpx

Please assign a menu to the primary menu location under menu

ಪೋಲೀಸರು, ವೈದ್ಯರ ಮೇಲೆ ದಾಳಿ ಮಾಡಿದ ಗೂಂಡಾಗಳಿಗೆ ಸಿಗಲಿರುವ ಶಿಕ್ಷೆಯೇನು ಗೊತ್ತೇ? ಇಲ್ಲಿದೆ ಡಿಟೈಲ್ಸ್

ಕೊರೋನಾ ಸೋಂಕಿನ ವಿರುದ್ಧ ಹೋರಾಡುತ್ತಿರುವ ಕೊರೋನಾ ವಾರಿಯರ್ಸ್ ಮೇಲೆ ನಡೆಯುತ್ತಿರುವ ದೌರ್ಜನ್ಯ ಪ್ರಕರಣಗಳ ಬಗ್ಗೆ ರಾಜ್ಯಾದ್ಯಂತ ತೀವ್ರ ಆಕ್ರೋಶ ವ್ಯಕ್ತವಾಗಿದೆ. ಎಲ್ಲಾ ಪಕ್ಷಗಳ ರಾಜಕೀಯ ನಾಯಕರೂ ಕೊರೋನಾ ಗೂಂಡಗಳ ದಾಂದಲೆಯನ್ನು ಪಕ್ಷಾತೀತವಾಗಿ ಕಟುಶಬ್ದಗಳಿಂದ ಖಂಡಿಸಿದ್ದಾರೆ.

ಇನ್ನೊಮ್ಮೆ ಇಂತಹ ಘಟನೆ ಮರುಕಳಿಸದಂತೆ ರಾಜ್ಯ ಸರ್ಕಾರವು ಕೇರಳ ಮತ್ತು ಉತ್ತರಪ್ರದೇಶ ಮಾದರಿ ಸುಗ್ರೀವಾಜ್ಞೆಯನ್ನು ರಾಜ್ಯದಲ್ಲಿಯೂ ಹೊರಡಿಸುವ ಮಹತ್ವದ ತೀರ್ಮಾನ ಕೈಗೊಂಡಿದೆ. ಸೋಮವಾರ ವಿಧಾನಸೌಧದಲ್ಲಿ ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಅಧ್ಯಕ್ಷತೆಯಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಸಾಂಕ್ರಾಮಿಕ ರೋಗ ತಡೆಗಟ್ಟಲು ಸಹಕರಿಸದವರಿಗೆ, ಕೊರೋನಾ ವಾರಿಯರ್ಸ್ ಮೇಲೆ ದಾಳಿ ನಡೆಸುವವರಿಗೆ ಶಿಕ್ಷೆ ವಿಧಿಸುವ ಸಂಬಂಧ ಕಠಿಣ ಕಾನೂನು ಜಾರಿಗೆ ಸುಗ್ರೀವಾಜ್ಞೆ ತರಲು ನಿರ್ಧರಿಸಲಾಯಿತು.

ಕರ್ನಾಟಕದಲ್ಲಿ ಸಾಂಕ್ರಾಮಿಕ ರೋಗ ಕಾಯ್ದೆಯಡಿ ಆಶಾ ಕಾರ್ಯಕರ್ತರು, ವೈದ್ಯರು, ಅಧಿಕಾರಿಗಳ ಮೇಲೆ ಹಲ್ಲೆ ನಡೆಸುವುದು ಹಾಗೂ ಉದ್ದೇಶಪೂರ್ವಕವಾಗಿ ಸೋಂಕು ಹಬ್ಬಿಸುವುದನ್ನು ಶಿಕ್ಷಾರ್ಹ ಅಪರಾಧ ಮಾಡುವ ನಿಟ್ಟಿನಲ್ಲಿ ಸುಗ್ರೀವಾಜ್ಞೆ ತರಲು ನಿರ್ಣಯ ಮಾಡಲಾಗಿದೆ.

ಇನ್ನು ಕೆಲವೇ ದಿನಗಳಲ್ಲಿ ಈ ಸುಗ್ರೀವಾಜ್ಞೆ ಜಾರಿಗೆ ಬರಲಿದ್ದು, ಕೊರೋನಾ ಗೂಂಡಾಗಳಿಗೆ ಎರಡು ವರ್ಷಗಳವರೆಗೆ ಶಿಕ್ಷೆ ವಿಧಿಸುವ ಅವಕಾಶ ಕಲ್ಪಿಸಲಾಗುತ್ತದೆ. 10 ಸಾವಿರ ರೂ.ಗಳವರೆಗೆ ದಂಡ ವಿಧಿಸುವ ಹಾಗೂ ದೌರ್ಜನ್ಯ ಎಸಗಿದವರ ಆಸ್ತಿಪಾಸ್ತಿ ಮುಟ್ಟುಗೋಲು ಹಾಕಿಕೊಳ್ಳುವ ಅಂಶವನ್ನು ಸೇರಿಸುವ ನಿರೀಕ್ಷೆಯಿದೆ. ಆದಷ್ಟು ಬೇಗ ಈ ಕಠಿಣ ಕಾನೂನು ಜಾರಿಗೆಯಾಗಲಿ, ಕೊರೋನಾ ಗೂಂಡಾಗಿರಿಗೆ ಮುಕ್ತಿಸಿಗಲಿ ಎಂಬುದು ರಾಜ್ಯದ ಜನರ ಆಶಯವಾಗಿದೆ.

error: Content is protected !!