fbpx

ದಾವಣಗೆರೆಯಲ್ಲಿ ಕರೋನಾ ಸೋಂಕಿತ ಮೃತದೇಹವನ್ನು ಜೆಸಿಬಿಯಲ್ಲಿ ಸಾಗಿಸಿ ಗುಂಡಿಗೆ ಎಸೆದ ಸಿಬ್ಬಂದಿ, ವೀಡಿಯೋ ವೈರಲ್

ಕರೋನಾದಿಂದ ಮೃತರಾದ ಮಹಿಳೆಯ ಶವವನ್ನು ಅಮಾನವೀಯವಾಗಿ ಅಂತ್ಯಸಂಸ್ಕಾರ ಮಾಡಿರುವ ಘಟನೆ ದಾವಣಗೆರೆಯ ಚೆನ್ನಗಿರಿ ತಾಲೂಕಿನಲ್ಲಿ ನಡೆದಿದೆ. ಬಳ್ಳಾರಿಯಲ್ಲಿ ಇದೇ ರೀತಿ ಕರೋನಾ ಸೋಂಕಿತರ ಶವವನ್ನು ಎಳೆದುಕೊಂಡು ಹೋಗಿ ಗುಂಡಿಗೆ ಎಸಿದಿರುವ ವೀಡಿಯೋ ವೈರಲ್ ಆಗಿತ್ತು, ಈ ಘಟನೆ ಮಾಸುವ ಮುನ್ನವೇ ಇದೀಗ ಮತ್ತೊಂದು ಘಟನೆ ಬೆಳಕಿಗೆ ಬಂದಿದೆ.

56 ವರ್ಷದ ಮಹಿಳೆ ತೀವ್ರ ಉಸಿರಾಟದ ತೊಂದರೆಯಿಂದ ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ದಾಖಲಾಗಿದ್ದು, ಚಿಕಿತ್ಸೆ ಫಲಿಸದೆ ಜೂ.17ರಂದು ಮೃತಪಟ್ಟಿದ್ದರು. ಅವರ ಗಂಟಲ ಧ್ರವ ಪರೀಕ್ಷೆ ಮಾಡಿದಾಗ ಅವರಿಗೆ ಸೋಂಕು ತಗುಲಿರುವುದು ಅಂದೇ ದೃಢಪಟ್ಟಿತ್ತು.

ಮೃತ ಮಹಿಳೆಯ ಶವವನ್ನು ಚನ್ನಗಿರಿಯ ಹೆದ್ದಾರಿಯ ಪಕ್ಕದಲ್ಲಿರುವ ವೀರಶೈವ ರುದ್ರಭೂಮಿಯಲ್ಲಿ ಅಂತ್ಯ ಸಂಸ್ಕಾರ ಮಾಡಲಾಗಿತ್ತು. ಶವವನ್ನು ಶ್ರದ್ಧಾಂಜಲಿ ವಾಹನದಲ್ಲಿ ರುದ್ರಭೂಮಿಗೆ ತರಲಾಗಿದ್ದು, ಜೆಸಿಬಿ ಯಂತ್ರದ ಬಕೆಟ್‌ನಲ್ಲಿ ಶವವನ್ನು ತುಂಬಿ ಗುಂಡಿಗೆ ತಳ್ಳಿ ಮಣ್ಣು ಮುಚ್ಚಿ ಶವಸಂಸ್ಕಾರ ಮಾಡಲಾಗಿದೆ.

ಶವ ಸಂಸ್ಕಾರ ಮಾಡುವ ಮೂವರು ಸಿಬ್ಬಂದಿ ಪಿಪಿಇ ಕಿಟ್ ಧರಿಸಿದ್ದರೂ ಶವವನ್ನು ಮುಟ್ಟಿಲ್ಲ. ಅಂತ್ಯಸಂಸ್ಕಾರ ಕಾರ್ಯದಲ್ಲಿ ಭಾಗಿಯಾಗಿದ್ದ ಅಧಿಕಾರಿಗಳು ಹಾಗೂ ಸಿಬ್ಬಂದಿ ಅನುಸರಿಸಿದ ಕ್ರಮ ವ್ಯಾಪಕ ಟೀಕೆಗೆ ಗುರಿಯಾಗಿದೆ. ಸದ್ಯ ಈ ವೀಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ವೀಡಿಯೋ ನೋಡಿ

Watch Video

error: Content is protected !!