fbpx

ಮಂಗಳೂರಿನ ಹೊರವಲಯದಲ್ಲಿ ಗುಡ್ಡ ಕುಸಿತ, ಮಣ್ಣಿನಡಿ ಸಿಲುಕಿದ್ದ ಇಬ್ಬರು ಬಾಲಕರ ಸಾವು

ಮಂಗಳೂರು ಹೊರವಲಯದ ಗುರುಪುರ ಬಂಗ್ಲಗುಡ್ಡೆಯಲ್ಲಿ ಆದಿತ್ಯವಾರ ಸಂಭವಿಸಿದ ಭೂಕುಸಿತದಲ್ಲಿ, ಮಣ್ಣಿನ ಅಡಿಯಲ್ಲಿ ಸಿಲುಕಿದ್ದ ಇಬ್ಬರು ಮಕ್ಕಳು ಮೃತಪಟ್ಟಿದ್ದಾರೆ. ಮೃತಪಟ್ಟ ಮಕ್ಕಳನ್ನು ಸಫ್ವಾನ್ (16), ಸಹಾಲ (10) ಎಂದು ತಿಳಿದುಬಂದಿದೆ.

ಕೆಲವು ಗಂಟೆಗಳ ಪ್ರಯತ್ನದ ನಂತರ ಪೊಲೀಸರು ಹಾಗೂ ಸ್ಥಳೀಯರು ಸೇರಿ ಮಣ್ಣಿನಡಿ ಸಿಲುಕಿದ್ದ ಮಕ್ಕಳನ್ನು ಇಬ್ಬರು ಮಕ್ಕಳನ್ನು ರಕ್ಷಿಸಲು ಪ್ರಯತ್ನಿಸಿದರಾದರೂ, ಅಷ್ಟರಲ್ಲಾಗಲೆ ಮಕ್ಕಳು ಉಸಿರುಗಟ್ಟಿ ಪ್ರಾಣಚೆಲ್ಲಿದ್ದರು.


Continue Reading

ಗುಡ್ಡ ಕುಸಿದ ಕೂಡಲೇ ಸ್ಥಳಕ್ಕೆ ಧಾವಿಸಿದ ಸ್ಥಳೀಯರು, ಪೊಲೀಸರ ಸಹಾಯದಿಂದ ರಕ್ಷಣಾ ಕಾರ್ಯಾಚರಣೆ ಆರಂಭಿಸಿದ್ದರು. ಆದರೂ ದುರದೃಷ್ಟವಶಾತ್ ಮಕ್ಕಳನ್ನು ರಕ್ಷಿಸಲು ಸಾಧ್ಯವಾಗಿಲ್ಲ. ಇದೀಗ ಕುಸಿದಿರುವ ಪ್ರದೇಶದ ಸುತ್ತಮುತ್ತಲಿನ ಹಲವಾರು ಮನೆಗಳೂ ಕುಸಿಯುವ ಅಪಾಯದಲ್ಲಿದೆ ಎಂದು ಹೇಳಲಾಗುತ್ತಿದೆ.

ಇದನ್ನೂ ಓದಿ:  ಕುಡುಕ ಕಾರು ಚಾಲಕನ ಆವಾಂತರಕ್ಕೆ ಅಮಾಯಕ ಬಲಿ, ಭೀಕರ ಅಪಘಾತದ ವಿಡಿಯೋ ವೈರಲ್

ಈಗಾಗಲೇ ಸುತ್ತಮುತ್ತಲಿನ 14 ಮನೆಗಳಲ್ಲಿ ವಾಸಿಸುವ ಕುಟುಂಬಗಳನ್ನು ಸುರಕ್ಷಿತ ಸ್ಥಳಗಳಿಗೆ ಸ್ಥಳಾಂತರಿಸಲಾಗಿದೆ. ಜಿಲ್ಲಾ ಉಸ್ತುವಾರಿ ಸಚಿವ ಕೋಟಾ ಶ್ರೀನಿವಾಸ್ ಪೂಜಾರಿ ಮತ್ತು ಜಿಲ್ಲಾಡಳಿತದ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿದ್ದು, ಸರ್ಕಾರದಿಂದ ಹೊಸ ಮನೆಗಳನ್ನು ನಿರ್ಮಿಸಲಾಗುವುದು ಎಂದು ಭರವಸೆ ನೀಡಿದ್ದಾರೆ.

Watch Video

Trending Short Videos


close

This will close in 26 seconds

error: Content is protected !!