fbpx

ಕೊರೋನಾ ಸಂಕಷ್ಟ, ನಡು ರಸ್ತೆಯಲ್ಲಿಯೇ ವಿವಾಹವಾದ ಜೋಡಿ. ವೈರಲ್ ವೀಡಿಯೋ ನೋಡಿ

ಕರೋನಾ ಮಹಾಮಾರಿಯಿಂದಾಗಿ ಅದ್ದೂರಿ ಮದುವೆಗಳಿಗೆ ಬ್ರೇಕ್ ಬಿದ್ದಿದೆ. ಮೊದಲು ಲಕ್ಷಾಂತರ ರೂಪಾಯಿ ಖರ್ಚು ಮಾಡಿ ದೊಡ್ಡದೊಡ್ಡ ಛತ್ರಗಳಲ್ಲಿ ನಡೆಯುತ್ತಿದ್ದ ಮದುವೆಗಳು ಇದು ತುಂಬಾ ಸಿಂಪಲ್ಲಾಗಿ ನಡಿಯುತ್ತಾ ಇದೆ.

ಇದೇ ತರಹದ ಸರಳ ಮದುವೆ ಇಂದು ಕರ್ನಾಟಕ-ಕೇರಳ ಗಡಿಯಲ್ಲಿ ನಡೆದಿದೆ. ಗಡಿ ಜಿಲ್ಲೆ ಚಾಮರಾಜನಗರದ ಮೂಲೆಹೊಳೆ ಚೆಕ್ ಪೋಸ್ಟ್ ನಲ್ಲಿಯೇ ಇಂದು ಕೇರಳ ಮೂಲದ ಯುವಕ ಹಾಗೂ ಶಿವಮೊಗ್ಗ ಜಿಲ್ಲೆಯ ಯುವತಿ ವಿವಾಹವಾಗುವ ಮೂಲಕ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ.

ಕೊರೊನಾ ನಿರ್ಬಂಧಗಳನ್ನು ಉಲ್ಲಂಘಿಸಬಾರದೆಂಬ ಉದ್ದೇಶದಿಂದ ಯುವ ಜೋಡಿ ಈ ನಿರ್ಧಾರ ಮಾಡಿದ್ದಾರೆ. ಅಲ್ಲದೆ ಅಂತರಾಜ್ಯ ಪ್ರಯಾಣ ಮಾಡಿದರೆ ಕ್ವಾರಂಟೈನ್ ಆಗಬೇಕು ಹೀಗಾಗಿ ಜೋಡಿ ಈ ಪ್ಲಾನ್ ಮಾಡಿದೆ. ನವ ಜೋಡಿ ಪರಸ್ಪರ ಹಾರ ಬದಲಾಯಿಸಿ, ವರ ತಾಳಿ ಕಟ್ಟುವ ಮೂಲಕ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ.

ಕಳೆದ ತಿಂಗಳು ಇಬ್ಬರಿಗೂ ನಿಶ್ಚಿತಾರ್ಥವಾಗಿದ್ದು, ಇದೀಗ ಮನೆಯವರ ಸಮ್ಮತಿಯೊಂದಿಗೆ ಶ್ರಾವಣ ಮಾಸ ಆರಂಭವಾಗುತ್ತಿದ್ದಂತೆ ರಸ್ತೆಯಲ್ಲೇ ವಿವಾಹವಾಗಿ ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದಾರೆ.

Watch Video

error: Content is protected !!