fbpx

ಮಕ್ಕಳ ಮುಂದೆಯೇ ಪತ್ರಕರ್ತನಿಗೆ ಗುಂಡಿಕ್ಕಿ ಹತ್ಯೆಗೈದ ಕಾಮುಕರ ಗುಂಪು, ಸಿಸಿಟಿವಿಯಲ್ಲಿ ಸೆರೆಯಾಯಿತು ಬೆಚ್ಚಿಬೀಳಿಸುವ ದೃಶ್ಯ

ಉತ್ತರಪ್ರದೇಶ ಮೂಲದ ಪತ್ರಕರ್ತರೊಬ್ಬರನ್ನು ದೆಹಲಿ ಸಮೀಪದ ಗಾಜಿಯಾಬಾದ್‌ನಲ್ಲಿ ದುಷ್ಕರ್ಮಿಗಳು ಗುಂಡಿಟ್ಟು ಹತ್ಯೆ ಮಾಡಿದ್ದಾರೆ. ದುಷ್ಕರ್ಮಿಗಳ ಗುಂಡಿನ ದಾಳಿಯಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಪತ್ರಕರ್ತ ವಿಕ್ರಮ್ ಜೋಶಿಯವರನ್ನು ಆಸ್ಪತ್ರೆಗೆ ದಾಖಲಿಸಲಾಯಿತಾದರೂ, ಅವರು ಇಂದು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.

ಘಟನೆಯ ಸಂಪೂರ್ಣ ದೃಶ್ಯ ಸಿಸಿಟಿವಿ ಕ್ಯಾಮರಾದಲ್ಲಿ ಸೆರೆಯಾಗಿದ್ದು, ತನ್ನ ಪುತ್ರಿಯರೊಂದಿಗೆ ಬೈಕ್ ಮೂಲಕ ತೆರಳುತ್ತಿದ್ದ ವಿಕ್ರಮ್ ಜೋಶಿಯವರನ್ನು ತಡೆದ ದುಷ್ಕರ್ಮಿಗಳು ಅವರ ಮೇಲೆ ಹಲ್ಲೆ ನಡೆಸಿ ಗುಂಡಿಕ್ಕಿದ್ದಾರೆ. ದಾಳಿಯಲ್ಲಿ ವಿಕ್ರಮ್ ಜೋಶಿ ಗಂಭೀರವಾಗಿ ಗಾಯಗೊಂಡು ರಸ್ತೆಯಲ್ಲಿ ನರಳಾಡುತ್ತಿದ್ದರೆ, ಅವರ ಪುತ್ರಿಯರು ಅಳುತ್ತಾ, ಕಿರುಚಾಡುತ್ತಾ ಸಹಾಯಕ್ಕಾಗಿ ಅಂಗಲಾಚುತ್ತಿರುವುದನ್ನು ಕಾಣಬಹುದಾಗಿದೆ.


ಸುದ್ದಿಗಳನ್ನು ತಕ್ಷಣ ಪಡೆಯಲು ನಮ್ಮ 'Telgram Channel' ಸೇರಿ

ಮೃತ ಪತ್ರಕರ್ತ ವಿಕ್ರಮ್ ಜೋಶಿಯವರು ಕೆಲದಿನಗಳ ಹಿಂದೆ ತಮ್ಮ ಸೊಸೆಯ ಮೇಲೆ ಕೆಲ ಕಾಮುಕರು ಲೈಂಗಿಕ ದೌರ್ಜನ್ಯ ನಡೆಸಿದ್ದಾಗಿ ಪೋಲೀಸರಿಗೆ ದೂರು ನೀಡಿದ್ದರು. ಇದೇ ಹಿನ್ನೆಲೆಯಲ್ಲಿ ಅವರ ಮೇಲೆ ಕಾಮುಕ ಕಿಡಿಗೇಡಿಗಳು ದಾಳಿ ನಡೆಸಿ ಹತ್ಯೆಮಾಡಿದ್ದಾರೆ. ಘಟನೆಗೆ ಸಂಬಂಧಿಸಿದಂತೆ ಪ್ರಮುಖ ಆರೋಪಿಗಳಾದ ರವಿ ಹಾಗೂ ಚೋಟು ಸೇರಿದಂತೆ 9 ಮಂದಿಯನ್ನು ಬಂಧಿಸಲಾಗಿದೆ. ಓರ್ವ ಆರೋಪಿ ತಲೆಮರೆಸಿಕೊಂಡಿದ್ದಾನೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಪೋಲೀಸರ ಕರ್ತವ್ಯ ಲೋಪವೂ ಈ ಘಟನೆಗೆ ನೇರ ಕಾರಣವಾಗಿದ್ದು, ವಿಕ್ರಮ್ ಜೋಶಿಯವರ ದೂರನ್ನು ಸ್ವೀಕರಿಸಿ ಎರಡು ದಿನ ಆದ್ರೂ ಪೋಲೀಸರು ಆರೋಪಿಗಳ ವಿರುದ್ಧ ಯಾವುದೇ ಕ್ರಮ ತೆಗೆದುಕೊಂಡಿರಲಿಲ್ಲ. ಈ ಸಂಬಂಧ ಈಗಾಗಲೇ ಇಬ್ಬರು ಪೊಲೀಸರನ್ನು ಅಮಾನತು ಮಾಡಲಾಗಿದೆ.

ಬಂಧಿತರಿಂದ ಕೃತ್ಯಕ್ಕೆ ಬಳಸಿದ್ದ ಆಯುಧಗಳನ್ನು ವಶಕ್ಕೆ ಪಡೆದುಕೊಳ್ಳಲಾಗಿದೆ ಎಂದು ಹಿರಿಯ ಪೊಲೀಸ್ ವರಿಷ್ಠಾಧಿಕಾರಿ ಕಲಾನಿಧಿ ನೈತಾನಿ ಮಾಹಿತಿ ನೀಡಿದ್ದಾರೆ. ದಾಳಿಯ ಸಿಸಿಟಿವಿ ದೃಶ್ಯಾವಳಿ ಇಲ್ಲಿದೆ ನೋಡಿ,

Watch Video

error: Content is protected !!