fbpx

Please assign a menu to the primary menu location under menu

ನಾಗರ ಪಂಚಮಿಗೆ ಕುಕ್ಕೆ ಸುಬ್ರಮಣ್ಯ ದೇವಸ್ಥಾನದಲ್ಲಿ ಪ್ರತ್ಯಕ್ಷನಾದ ನಾಗರಾಜ, ವೀಡಿಯೋ ನೋಡಿ

ಮಹಾಮಾರಿ ಕರೋನಾ ಸೋಂಕಿನ ಹಿನ್ನೆಲೆಯಲ್ಲಿ ಇಂದು ಕರಾವಳಿಯೆಲ್ಲೆಡೆ ನಾಗರ ಪಂಚಮಿಯನ್ನು ಸರಳವಾಗಿ ಆಚರಿಸಲಾಗುತ್ತಿದೆ. ಸೋಂಕಿನ ಹಿನ್ನೆಲೆಯಲ್ಲಿ ಸಾರ್ವಜನಿಕವಾಗಿ ನಾಗರ ಪಂಚಮಿ ಆಚರಿಸುವಂತಿಲ್ಲ ಎಂದು ದಕ್ಷಿಣಕನ್ನಡ ಜಿಲ್ಲಾಡಳಿತ ಈಗಾಗಲೇ ಸೂಚನೆ ನೀಡಿದೆ.

ಈ ಹಿನ್ನೆಲೆಯಲ್ಲಿ ನಾಗಾರಾಧನೆ ನಡೆಯುವ ಪ್ರಮುಖ ದೇವಾಲಯಗಳಲ್ಲಿ ಇಂದು ಬೆಳಗ್ಗೆ ಸಾರ್ವಜನಿಕವಾಗಿ ನಾಗರ ಪಂಚಮಿ ಆಚರಣೆ ನಡೆದಿಲ್ಲ. ದೇವಾಲಯಗಳ ಅರ್ಚಕರು ಹಾಗೂ ಸಿಬ್ಬಂದಿ ಮಾತ್ರ ಸಾಂಪ್ರದಾಯಿಕ ಪೂಜೆಗಳನ್ನು ನೆರವೇರಿಸಿದರು.

ಅದರಲ್ಲೂ ಇತಿಹಾಸ ಪ್ರಸಿದ್ಧ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನ ಭಕ್ತರಿಗೆ ತೆರೆಯದಿರಲು ದೇವಸ್ಥಾನದ ಆಡಳಿತ ಮಂಡಳಿ ತೀರ್ಮಾನ ಮಾಡಿದ್ದು, ಇದು ಭಕ್ತರಿಗೆ ನಿರಾಸೆ ಮೂಡಿಸಿತ್ತು. ಪ್ರತಿವರ್ಷ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ರಾಜ್ಯ ಹಾಗೂ ದೇಶದಾದ್ಯಂತ ಭಕ್ತರ ದಂಡು ಹರಿದುಬರುತ್ತಿತ್ತು. ಆದರೇ ಈ ಬಾರಿ ನಾಗರಪಂಚಮಿಯಂದು ಭಕ್ತರಿಗೆ ದೇಗುಲಕ್ಕೆ ಪ್ರವೇಶಿಸಲು ಅವಕಾಶವಿಲ್ಲ.

ದೇವಾಯದ ಅರ್ಚಕರು ಕುಕ್ಕೆ ಸುಬ್ರಹ್ಮಣ್ಯನಿಗೆ ವಿಶೇಷ ಪೂಜೆಯನ್ನು ಸಲ್ಲಿಸಿದ್ದಾರೆ. ಈ ಸಂದರ್ಭದಲ್ಲಿ ನಾಗದೇವ ಸ್ವಯಂ ಪ್ರತ್ಯಕ್ಷನಾಗಿದ್ದಾನೆ. ದೇವಾಲಯದ ವಠಾರದಲ್ಲಿ ನಾಗರಾಜ ಸಾಗುತ್ತಿರುವ ವೀಡಿಯೋ ಇದೀಗ ಸಾಮಾಜಿಕ ತಾಣದಲ್ಲಿ ವೈರಲ್ ಆಗಿದೆ. ಇಲ್ಲಿದೆ ನೋಡಿ ವೀಡಿಯೋ,

Watch Video

error: Content is protected !!