ಕುಡಿದು ಮತ್ತೇರಿದ ಕುಡುಕನ ರಂಪಾಟದ ವೀಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಇಂದು ಬೆಳ್ಳಂಬೆಳಗ್ಗೆ ಬೀದರ್ ಓಲ್ಡ್ ಸಿಟಿಯಲ್ಲಿ ಕುಡುಕನ ಅವಾಂತರಕ್ಕೆ ಸ್ಥಳೀಯ ಜನ ಬೆಚ್ಚಿಬಿದ್ದ ಘಟನೆ ನಡೆದಿದೆ.
ಬೆಳಗ್ಗೆ ಸುಮಾರು 5ಗಂಟೆ ಹೊತ್ತಿಗೆ ಕುಡಿದ ಅಮಲಿನಲ್ಲಿ ವ್ಯಕ್ತಿ ಮಾರಕಾಸ್ತ್ರ ಹಿಡಿದು ಪುಂಡತನ ತೋರಿದ್ದಾನೆ. ಇದನ್ನು ಗಮನಿಸಿದ ಸ್ಥಳೀಯರು ಪೊಲೀಸರನ್ನು ಕರೆದ್ರೆ, ಬಂಧಿಸಲು ಬಂದ ಪೋಲೀಸರ ಮೇಲೂ ಮಾರಕಾಸ್ತ್ರ ಬೀಸಿ ಹಲ್ಲೆ ನಡೆಸಲು ಮುಂದಾಗಿದ್ದು ಕೆಲಕಾಲ ಜನರಲ್ಲಿ ಆತಂಕ ಉಂಟುಮಾಡಿತ್ತು.
ಇದರ ನಡುವೆಯೇ ಆತ ಅಲ್ಲೇ ರಸ್ತೆ ಬದಿ ನಿಲ್ಲಿಸಿದ್ದ ಕಾರ್ಗಳ ಗ್ಲಾಸ್ಗಳನ್ನು ಜಖಂಗೊಳಿಸಿ ಸ್ಥಳೀಯರ ಮೇಲೂ ಹಲ್ಲೆ ನಡೆಸಲು ಮುಂದಾಗಿದ್ದಾನೆ. ನಂತರ ಸ್ಥಳೀಯ ಯುವಕರ ಸಹಾಯದಿಂದ ಪೋಲೀಸರು ಆತನನ್ನು ಬಂಧಿಸಿದ್ದಾರೆ. ಈತನ ರಂಪಾಟದ ವೀಡಿಯೋ ಸ್ಥಳೀಯರ ಮೊಬೈಲ್ ಕ್ಯಾಮೆರಾ ಮೂಲಕ ಸೆರೆಯಾಗಿದ್ದು, ಇದೀಗ ವೈರಲ್ ಆಗಿದೆ. ವೀಡಿಯೋ ನೋಡಿ,