fbpx

Please assign a menu to the primary menu location under menu

ಏಕಾಏಕಿ ಸ್ಕೂಟಿಗೆ ಡಿಕ್ಕಿ ಹೊಡೆದು ಯುವತಿಯ ಮೈಮೇಲೆ ಹರಿದ ಕಾರು, ಶಾಕಿಂಗ್ ವಿಡಿಯೋ

ದಕ್ಷಿಣಕನ್ನಡ ಜಿಲ್ಲೆಯ ಮಂಗಳೂರು ತಾಲೂಕಿನ ಕದ್ರಿಯಲ್ಲಿ ನಡೆದ ರಸ್ತೆ ಅಪಘಾತದಲ್ಲಿ ಯುವತಿಯೊಬ್ಬಳು ಗಂಭೀರವಾಗಿ ಗಾಯಗೊಂಡಿದ್ದಾಳೆ. ಕದ್ರಿ ಕಂಬಳ ಜಂಕ್ಷನ್‌ನಲ್ಲಿ ಈ ಭೀಕರ ಅಪಘಾತ ಸಂಭವಿಸಿದ್ದು, ಯುವತಿ ಚಲಾಯಿಸುತ್ತಿದ್ದ ಸ್ಕೂಟಿಗೆ ಆಕೆಯ ಎಡಭಾಗದಿಂದ ಬರುತ್ತಿದ್ದ ಕಾರು ಡಿಕ್ಕಿ ಹೊಡೆದಿದೆ.

ಡಿಕ್ಕಿಯ ರಭಸಕ್ಕೆ ಯುವತಿ ಕಾರಿನ ಬೋನೆಟ್ ಮೇಲೆ ಬಿದ್ದು ರಸ್ತೆಗೆ ಉರುಳಿದ್ದಾಳೆ. ಆದರೂ ಕಾರು ಆಕೆಯನ್ನು ಸ್ವಲ್ಪ ದೂರದವರೆಗೆ ಎಳೆದೊಯ್ದಿದ್ದು, ಯುವತಿ ಕಾರಿನ ಅಡಿಯಲ್ಲಿ ಸಿಲುಕಿದ್ದಾಳೆ. ತಕ್ಷಣ ಸ್ಥಳದಲ್ಲಿದ್ದ ಪೋಲೀಸರು ಹಾಗೂ ಸ್ಥಳೀಯರು ಸೇರಿ ಕಾರನ್ನೆತ್ತಿ, ಕಾರಿನ ಅಡಿ ಸಿಲುಕಿದ್ದ ಯುವತಿಯನ್ನು ಹೊರಗಡೆ ತೆಗೆದಿದ್ದಾರೆ.

ಅದೇ ಮಾರ್ಗವಾಗಿ ಹೋಗುತ್ತಿದ್ದ ಶಾಸಕ ಯು.ಟಿ.ಖಾದರ್ ಗಂಭೀರವಾಗಿ ಗಾಯಗೊಂಡ ಯುವತಿಯನ್ನು ತಮ್ಮ ಕಾರಿನಲ್ಲಿ ಆಸ್ಪತ್ರೆಗೆ ದಾಖಲಿಸಿ ಮಾನವೀಯತೆ ಮೆರೆದಿದ್ದಾರೆ. ಗಾಯಗೊಂಡ ಯುವತಿಯನ್ನು ಪುತ್ತೂರಿನ ಕೆದಿಲ ನಿವಾಸಿ ವಾಣಿಶ್ರೀ ಭಟ್(22) ಎಂದು ಗುರುತಿಸಲಾಗಿದೆ. ಅಪಘಾತದಲ್ಲಿ ಯುವತಿಯ ತಲೆಗೆ ಹಾಗೂ ಪಕ್ಕೆಲುಬು ಭಾಗಕ್ಕೆ ತೀವ್ರ ಪೆಟ್ಟಾಗಿದ್ದು, ಖಾಸಗಿ ಆಸ್ಪತ್ರೆಯ ತೀವ್ರನಿಗಾ ಘಟಕದಲ್ಲಿ ಚಿಕಿತ್ಸೆ ಕೊಡಿಸಲಾಗುತ್ತಿದೆ.

ಅಪಘಾತ ನಡೆದ ಸ್ಥಳದಲ್ಲಿ ಈ ಹಿಂದೆಯೂ ಅನೇಕ ಅಪಘಾತಗಳು ಸಂಭವಿಸಿದ್ದು, ಕಳೆದ ವರ್ಷ ಇದೇ ಸ್ಥಳದಲ್ಲಿ ನಡೆದ ಭೀಕರ ಅಪಘಾತದಲ್ಲಿ ಮಹಿಳಾ ಅಧ್ಯಾಪಕಿಯೊಬ್ಬರು ಮೃತಪಟ್ಟಿದ್ದರು. ತುಂಬಾ ವಾಹನ ದಟ್ಟನೆ ಮತ್ತು ಅತಿ ವೇಗದ ಚಾಲನೆಯಿಂದಾಗಿ ಇಲ್ಲಿ ಪ್ರತಿದಿನ ಅಪಘಾತಗಳು ಸಂಭವಿಸುತ್ತಿದ್ದು, ಇದಕ್ಕೆ ಶಾಶ್ವತ ಪರಿಹಾರ ಕಲ್ಪಿಸುವಂತೆ ಸ್ಥಳೀಯರು ಪಾಲಿಕೆ ಅಧಿಕಾರಿಗಳು, ಜನಪ್ರತಿನಿಧಿಗಳಲ್ಲಿ ಆಗ್ರಹಿಸಿದ್ದಾರೆ. ಶುಕ್ರವಾರ ನಡೆದ ಅಪಘಾತದ ಸಿಸಿಟಿವಿ ದೃಶ್ಯ ಇಲ್ಲಿದೆ ನೋಡಿ,

Watch Video

error: Content is protected !!