fbpx

ಕರಾವಳಿಯಲ್ಲಿ ಯಾವ ರೀತಿ ಗಾಂಜಾ ಸಾಗಿಸಲಾಗುತ್ತಿದೆ ನೋಡಿ (ವೈರಲ್ ವಿಡಿಯೋ)

ಕರಾವಳಿಯಲ್ಲಿ ಮಾದಕ ದ್ರವ್ಯ ವ್ಯಸನಿಗಳ ಸಂಖ್ಯೆ ಕೆಲ ವರ್ಷಗಳಿಂದ ಭಾರೀ ಪ್ರಮಾಣದಲ್ಲಿ ಏರಿಕೆಯಾಗಿದೆ. ಭಾರೀ ಪ್ರಮಾಣದಲ್ಲಿ ಅಕ್ರಮವಾಗಿ ಮಾದಕ ದ್ರವ್ಯಗಳ ಸಾಗಾಟ ನಡೆಯುತ್ತಿದ್ದು, ಯುವಜನತೆ ಇದರ ವ್ಯಸನಕ್ಕೆ ಬಿದ್ದು ಜೀವನವನ್ನೇ ಹಾಳು ಮಾಡಿಕೊಳ್ಳುತ್ತಿದ್ದಾರೆ.

ಕಳೆದ ಕೆಲ ವರ್ಷಗಳಿಂದ ಇದರ ಪ್ರಮಾಣ ಗಣನೀಯವಾಗಿ ಏರಿಕೆಯಾಗಿದೆ, ಶಾಲಾ-ಕಾಲೇಜು ವಿದ್ಯಾರ್ಥಿಗಳು ಕೂಡ ಇಂತಹ ದುಷ್ಚಟಕ್ಕೆ ಬೀಳುತ್ತಿರೋದು ಅವರ ಭವಿಷ್ಯಕ್ಕೆ ಮುಳುವಾಗಿ ಪರಿಣಮಿಸಿದೆ.

ಕೆಲ ದಿನಗಳ ಹಿಂದೆ ಪುತ್ತೂರು ತಾಲೂಕಿನಲ್ಲಿ ಜೋಳ ಸಾಗಾಟದ ವಾಹನದಲ್ಲಿ ಬೃಹತ್ ಪ್ರಮಾಣದ ಗಾಂಜ ಪತ್ತೆಯಾಗಿತ್ತು. ಇದರ ಬೆನ್ನಲ್ಲೇ ಇದೀಗ ಉಡುಪಿಯಲ್ಲಿ ಬಿದಿರಿನ ಮಧ್ಯದಲ್ಲಿ ಗಾಂಜ ಸಾಗಾಟ ಪತ್ತೆಯಾಗಿದೆ.

ಬಿದಿರು ಸಾಗಾಟ ಮಾಡುತ್ತಿದ್ದ ವಾಹನದಲ್ಲಿ ಗಾಂಜಾ ಸಾಗಿಸುತ್ತಿರುವ ಬಗ್ಗೆ ಖಚಿತ ಮಾಹಿತಿ ಆಧರಿಸಿ ಪೋಲೀಸರು ದಾಳಿ ಮಾಡಿದ್ದು, ಬಿದಿರಿನ ಕೋಲುಗಳ ಒಳಗೆ ಭಾರೀ ಪ್ರಮಾಣದಲ್ಲಿ ಗಾಂಜಾ ಪತ್ತೆಯಾಗಿದೆ. ಬಿದಿರಿನೊಳಗಿನಿಂದ ಗಾಂಜ ತೆಗೆಯುವ ದೃಶ್ಯ ಇದೀಗ ವೈರಲ್ ಆಗಿದ್ದು, ಇಲ್ಲಿದೆ ನೋಡಿ ವಿಡಿಯೋ,

Watch Video

error: Content is protected !!