fbpx

Please assign a menu to the primary menu location under menu

ಟ್ರಕ್ ಚಾಲಕನ ಅವಾಂತರಕ್ಕೆ ಬಲಿಯಾದ ಮಹಿಳೆ! ಬೆಚ್ಚಿಬೀಳಿಸುವ ವಿಡಿಯೋ ನೋಡಿ

ಸಾವು ಯಾವ ರೀತಿಯಲ್ಲಿ ಬರಬಹುದು ಎಂದು ಊಹಿಸಲು ಸಾಧ್ಯವಿಲ್ಲ. ಇದೀಗ ಜವರಾಯನ ಅಟ್ಟಹಾಸದ ವಿಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

ಮಧ್ಯಪ್ರದೇಶದ ಸಾಗರ್ ಜಿಲೆಯಲ್ಲಿ ರೈಲ್ವೇ ಕ್ರಾಸಿಂಗ್ ಬಳಿ ನಡೆದ ಭೀಕರ ಅಪಘಾತದ ವಿಡಿಯೋ ಇದಾಗಿದ್ದು, ಬೆಚ್ಚಿಬೀಳಿಸುವಂತಿದೆ. ನಿಯಂತ್ರಣ ತಪ್ಪಿದ ಟ್ರಕ್ ಒಂದು ರೈಲ್ವೇ ಗೇಟ್ ಬಳಿ ನಿಂತಿದ್ದ ವಾಹನಗಳಿಗೆ ಗುದ್ದಿ ಈ ಭೀಕರ ಅಪಘಾತ ಸಂಭವಿಸಿದೆ.

ರೈಲ್ವೇ ಗೇಟ್ ಹಾಕಿದ್ದ ಕಾರಣ ವಾಹನಗಳು ರೈಲ್ವೇ ಹಳಿಯ ಎರಡೂ ಕಡೆಗಳಲ್ಲಿ ಸಾಲು ಗಟ್ಟಿ ನಿಂತಿದ್ದವು. ಇದೇ ಸಂದರ್ಭದಲ್ಲಿ ವೇಗವಾಗಿ ಬಂದ ಟ್ರಕ್ ಒಂದು ಪಿಕಪ್ ವಾಹನವನ್ನು ತಳ್ಳಿಕೊಂಡು ಮುಂದಕ್ಕೆ ಬಂದಿದೆ.

ರೈಲ್ವೇ ಗೇಟ್ ಬಳಿ ನಿಂತಿದ್ದ ಮಹಿಳೆಯೊಬ್ಬರು ಪಿಕಪ್ ವಾಹನ ಹಾಗೂ ಲಾರಿಯ ಮಧ್ಯೆ ಸಿಕ್ಕು ಸ್ಥಳದಲ್ಲೇ ಪ್ರಾಣ ಕಳೆದುಕೊಂಡಿದ್ದಾರೆ. ಘಟನೆ ನಡೆಯುತ್ತಲೇ ಟ್ರಕ್ ಚಾಲಕ ಹಾಗೂ ಕ್ಲೀನರ್ ಸ್ಥಳದಿಂದ ಪರಾರಿಯಾಗಿದ್ದಾರೆ.

ಘಟನೆಯ ದೃಶ್ಯಾವಳಿಗಳು ರೈಲ್ವೇ ಗೇಟ್ ಬಳಿ ಅಳವಡಿಸಿದ್ದ ಸಿಸಿಟಿವಿ ಕ್ಯಾಮರಾದಲ್ಲಿ ಸೆರೆಯಾಗಿದ್ದು, ಅಪಘಾತದ ಭೀಕರತೆಯನ್ನು ವಿವರಿಸುತ್ತದೆ. ಘಟನೆಯಲ್ಲಿ ಹಲವರು ಗಾಯಗೊಂಡಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಸಾಗರ್ ಪೋಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ. ಭೀಕರ ಅಪಘಾತ ವಿಡಿಯೋ ಇಲ್ಲಿದೆ ನೋಡಿ,

Watch Video

video
error: Content is protected !!