fbpx

Please assign a menu to the primary menu location under menu

ರಸ್ತೆಯಲ್ಲಿ ಆಟವಾಡುತ್ತಿದ್ದ ಪುಟ್ಟ ಮಗುವಿನ ಮೇಲೆ ಕಾರು ಹತ್ತಿಸಿ ಪರಾರಿಯಾದ ಚಾಲಕ! ಶಾಕಿಂಗ್ ವಿಡಿಯೋ ನೋಡಿ

ರಸ್ತೆಯಲ್ಲಿ ಆಟವಾಡುತ್ತಿದ್ದ ಪುಟ್ಟ ಮಗುವಿನ ಮೇಲೆ ಕಾರು ಚಾಲಕನೋರ್ವ ಕಾರನ್ನು ಹರಿಸಿಕೊಂಡು ಹೋದ ಘಟನೆ ಮುಂಬೈನಲ್ಲಿ ನಡೆದಿದೆ. ಮುಂಬೈನ ಮಲ್ವಾನಿ ಪ್ರದೇಶದಲ್ಲಿ ಈ ಘಟನೆ ನಡೆದಿದ್ದು, ಘಟನೆಯ ಸಿಸಿಟಿವಿ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

ಸಪ್ಟೆಂಬರ್ 11ರಂದು ಈ ಘಟನೆ ನಡೆದಿದ್ದು, ಮನೆಯ ಮುಂದಿನ ರಸ್ತೆಯಲ್ಲಿ 3ವರ್ಷದ ಮಗು ಆಟವಾಡುತ್ತಿದ್ದರೆ ಅದೇ ರಸ್ತೆಯಲ್ಲಿ ಬಂದ ಕಾರು ಆ ಮಗುವಿನ ಮೇಲೆ ಹರಿದಿದೆ. ಘಟನೆಯ ವಿಡಿಯೋ ಸಿಸಿಟಿವಿ ಕ್ಯಾಮರಾದಲ್ಲಿ ಸೆರೆಯಾಗಿದ್ದು, ಬೆಚ್ಚಿಬೀಳಿಸುವಂತಿದೆ.

ಘಟನೆ ನಡೆದ ತಕ್ಷಣ ಕಾರು ಚಾಲಕ ಅಲ್ಲಿಂದ ಕಾರಿನಲ್ಲಿ ಪರಾರಿಯಾಗಿದ್ದಾನೆ. ಕೂಡಲೇ ಸ್ಥಳೀಯರು ಗಾಯಗೊಂಡ ಬಾಲಕನನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಸದ್ಯ ಚೇರಿಸಿಕೊಂಡಿದ್ದಾನೆ.

ಪರಾರಿಯಾಗಿರುವ ಕಾರು ಚಾಲಕನ ವಿರುದ್ಧ ಪ್ರಕರಣ ದಾಖಲಿಸಲಾಗಿದ್ದು, ಸಿಸಿಟಿವಿ ದೃಶ್ಯ ಆಧರಿಸಿ ಕಾರು ಡ್ರೈವರ್ ವಿರುದ್ಧ ಕೇಸ್ ದಾಖಲಾಗಿದೆ. ಘಟನೆಯ ವೈರಲ್ ವಿಡಿಯೋ ಇಲ್ಲಿದೆ ನೋಡಿ,

Watch Video

video
error: Content is protected !!