fbpx

ನೋಡನೋಡುತ್ತಿದ್ದಂತೆ ಪ್ರವಾಹದಲ್ಲಿ ಕೊಚ್ಚಿ ಹೋಯಿತು ಲಾರಿ, ವೈರಲ್ ವಿಡಿಯೋ ನೋಡಿ

ಬೀದರ್‌ನಲ್ಲಿ ಕಳೆದ ಕೆಲ ದಿನಗಳಿಂದ ಸುರಿಯುತ್ತಿರುವ ಭಾರೀ ಮಳೆಗೆ ಪ್ರವಾಹ ಪರಿಸ್ಥಿತಿ ಎದುರಾಗಿದೆ. ನದಿಗಳು ಉಕ್ಕಿ ಹರಿಯುತ್ತಿದ್ದು, ಇದೀಗ ಮಳೆ ಅವಾಂತರಕ್ಕೆ ಲಾರಿಯೊಂದು ಪ್ರವಾಹಕ್ಕೆ ಕೊಚ್ಚಿಕೊಂಡು ಹೋದ ವಿಡಿಯೋ ವೈರಲ್ ಆಗಿದೆ.

ಬೀದರ್ ಜಿಲ್ಲೆ ಹಾಗೂ ಮಹಾರಾಷ್ಟ್ರದ ಲಾತೂರ್ ಕ್ಕೆ ಸಂಪರ್ಕ ಕಲ್ಪಿಸುವ ಸೇತುವೆ ಜಲಾವೃತಗೊಂಡಿದೆ. ಭಾಲ್ಕಿ ತಾಲೂಕಿನ ಜಮಖಂಡಿ ಗ್ರಾಮದ ಬಳಿ ಮಹಾರಾಷ್ಟ್ರದಿಂದ ತೆಲಂಗಾಣಕ್ಕೆ ತೆರಳುತ್ತಿದ್ದ ಲಾರಿಯೊಂದು ಪ್ರವಾಹದಲ್ಲಿ ಕೊಚ್ಚಿಕೊಂಡು ಹೋಗಿದೆ.

ಕೋಳಿಗೆ ಹಾಕುವ ಆಹಾರ ಧಾನ್ಯ ತೆಗೆದುಕೊಂಡು ಹೋಗುತ್ತಿದ್ದ ಲಾರಿ ತುಂಬಿ ಹರಿಯುತ್ತಿದ್ದ ಸೇತುವೆ ಮೇಲೆ ಸಂಚರಿಸಿದ್ದು, ನೀರಿನ ರಭಸಕ್ಕೆ ಲಾರಿ ನೀರು ಪಾಲಾದ ಘಟನೆ ನಡೆದಿದೆ. ಅದರಲ್ಲಿದ್ದ ವಸ್ತುಗಳು ಪ್ರವಾಹದ ನೀರು ಪಾಲಾಗಿದೆ.

ಸೇತುವೆ ಮೇಲೆ ನೀರು ಉಕ್ಕಿ ಹರಿಯುತ್ತಿದ್ರು ಲಾರಿ ಚಾಲಕ ನಿರ್ಲಕ್ಷ ವಹಿಸಿದ್ದೆ ಈ ಘಟನೆಗೆ ಕಾರಣ. ನೀರಿನ ರಭಸಕ್ಕೆ ಲಾರಿ ಪಲ್ಟಿಯಾಗಿದ್ದು, ಲಾರಿಯಲ್ಲಿದ್ದ ಆಹಾರ ಸಾಮಗ್ರಿಗಳು ನೀರು ಪಾಲಾಗಿವೆ.

Watch Video

error: Content is protected !!