fbpx

Please assign a menu to the primary menu location under menu

ಲ್ಯಾಂಡ್ ಆಗುತ್ತಿದ್ದಂತೆ ಬೆಂಕಿ ಹತ್ತಿಕೊಂಡು ಸುಟ್ಟುಕರಕಲಾದ ವಿಮಾನ! 22 ಮಂದಿ ಸಜೀವ ದಹನ (ವಿಡಿಯೋ)

ಸೇನಾ ವಿಮಾನವೊಂದು ಲ್ಯಾಂಡಿಂಗ್ ವೇಳೆಯಲ್ಲಿ ಪತನಗೊಂಡು ಹೊತ್ತಿ ಉರಿದ ಘಟನೆ ಉಕ್ರೇನ್‌ನಲ್ಲಿ ಶುಕ್ರವಾರ ರಾತ್ರಿ ನಡೆದಿದೆ. ವಿಮಾನದಲ್ಲಿ ಪ್ರಯಾಣಿಸುತ್ತಿದ್ದ 22 ಮಂದಿ ಸಜೀವ ದಹನವಾಗಿದ್ದಾರೆ.

ವಿಮಾನದಲ್ಲಿ ವಾಯುಪಡೆಯ ಕೆಡೆಟ್‌ಗಳು ಸಂಚರಿಸುತ್ತಿದ್ದು, ಇನ್ನೇನು ಲ್ಯಾಂಡ್ ಆಗಬೇಕು ಎನ್ನುವಷ್ಟರಲ್ಲಿ ಪತನವಾಗಿದೆ. ಕೂಡಲೇ ವಿಮಾನಕ್ಕೆ ಬೆಂಕಿ ಹತ್ತಿಕೊಂಡಿದ್ದು ವಿಮಾನದಲ್ಲಿ ಪ್ರಯಾಣಿಸುತ್ತಿದ್ದ ವಿದ್ಯಾರ್ಥಿಗಳು, ಅಧಿಕಾರಿಗಳು ಹಾಗೂ ವಿಮಾನದ ಪೈಲಟ್‌ಗಳು ಸುಟ್ಟು ಕರಕಲಾಗಿದ್ದಾರೆ.

ವಿಮಾನಕ್ಕೆ ಬೆಂಕಿ ಹತ್ತಿಕೊಳ್ಳುತ್ತಿದ್ದಂತೆ ರಕ್ಷಣಾ ತಂಡ ಸ್ಥಳಕ್ಕೆ ಧಾವಿಸಿದ್ದು, ಗಂಭೀರವಾಗಿ ಗಾಯಗೊಂಡ ಇಬ್ಬರನ್ನು ರಕ್ಷಿಸಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಘಟನೆಯಲ್ಲಿ ನಾಲ್ವರು ನಾಪತ್ತೆಯಾಗಿರೋದಾಗಿ ಉಕ್ರೇನ್ನ ತುರ್ತು ಸೇವಾ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ವಿಮಾನ ಪತನಕ್ಕೆ ನಿಖರ ಕಾರಣ ಇನ್ನೂ ತಿಳಿದುಬಂದಿಲ್ಲ. ಈ ಕುರಿತು ತನಿಖೆ ಆದೇಶಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

Watch Video

video
error: Content is protected !!