ವಿಷ್ಣುವರ್ಧನ್ ಅವರ ಪ್ರತಿಮೆಯ ಧ್ವಂಸ ಪ್ರಕರಣ ಕುರಿತು ಈಗಾಗಲೇ ಹಲವಾರು ನಟರು ಬೇಸರವನ್ನು ವ್ಯಕ್ತಪಡಿಸಿದ್ದು ತಮ್ಮ ಆಕ್ರೋಶವನ್ನು ಹೊರಹಾಕಿದ್ದಾರೆ. ಇನ್ನು ವಿಷ್ಣುವರ್ಧನ್ ಅವರ ಅಪ್ಪಟ ಅಭಿಮಾನಿ ಕಿಚ್ಚ ಸುದೀಪ್ ಅವರು ವಿಷ್ಣುವರ್ಧನ್ ಪ್ರತಿಮೆಯನ್ನು ಧ್ವಂಸ ಮಾಡಿದವರಿಗೆ ಖಡಕ್ ಎಚ್ಚರಿಕೆಯನ್ನು ನೀಡಿದ್ದು, ಇದೀಗ ಈ ವಿಡಿಯೋ ವೈರಲ್ ಆಗಿದೆ.
ತಮ್ಮ ಟ್ವಿಟರ್ ಖಾತೆಯಲ್ಲಿ ಈ ಬಗ್ಗೆ ವಿಡಿಯೋ ಹಂಚಿಕೊಂಡಿರುವ ಕಿಚ್ಚ ಸುದೀಪ್, ಮಾಗಡಿ ರಸ್ತೆಯಲ್ಲಿನ ವಿಷ್ಣುವರ್ಧನ್ ಪ್ರತಿಮೆಯನ್ನು ಧ್ವಂಸ ಮಾಡಿದವರು ಯಾರು ಎಂಬುದು ಹೊರಬೀಳುತ್ತಿದ್ದಂತೆಯೇ ಅವರು ದೇಶವನ್ನು ಬಿಟ್ಟು ಬಿಡುವುದು ಒಳ್ಳೆಯದು ಎಂದು ಎಚ್ಚರಿಕೆಯನ್ನು ನೀಡಿದ್ದಾರೆ.
ವಿಷ್ಣು ದಾದಾ ಅವರ ಪ್ರತಿಮೆಯನ್ನು ಹೊಡೆದು ಹಾಕಿರುವವರು ದೇಶವನ್ನು ಬಿಟ್ಟು ಓಡಿಹೋಗಿ ಇಲ್ಲವಾದರೆ ನಿಮ್ಮನ್ನು ಅಭಿಮಾನಿಗಳು ಸುಮ್ಮನೆ ಬಿಡುವುದಿಲ್ಲ ಎಂದು ಹೇಳಿದ್ದಾರೆ. ಒಟ್ಟಿನಲ್ಲಿ ವಿಷ್ಣುವರ್ಧನ್ ಅವರ ಪ್ರತಿಮೆ ಧ್ವಂಸ ಪ್ರಕರಣ ದಿನದಿಂದ ದಿನಕ್ಕೆ ತೀವ್ರವಾದ ಸ್ವರೂಪವನ್ನು ಪಡೆದುಕೊಳ್ಳುತ್ತಿದ್ದು, ಪ್ರತಿಮೆ ಧ್ವಂಸ ಮಾಡಿದವರು ಯಾರು ಎಂಬುದು ತಿಳಿದ ನಂತರ ಪರಿಸ್ಥಿತಿ ಏನಾಗಲಿದೆ ಎಂಬುದನ್ನು ಕಾದುನೋಡಬೇಕು.