fbpx

ಮತ ಎಣಿಕೆ ವೇಳೆ SDPI ಕಾರ್ಯಕರ್ತರಿಂದ ‘ಪಾಕಿಸ್ತಾನ್ ಜಿಂದಾಬಾದ್’ ಘೋಷಣೆ? ವಿಡಿಯೋ ವೈರಲ್

ರಾಜ್ಯದಲ್ಲಿ ‘ಪಾಕಿಸ್ತಾನ್ ಜಿಂದಾಬಾದ್’ ಘೋಷಣೆ ಪ್ರಕರಣಗಳು ಪದೇ ಪದೇ ನಡೆಯುತ್ತಿದ್ದು, ಕೆಲ ಸಮಯಗಳ ಹಿಂದಷ್ಟೆ CAA/NRC ವಿರೋಧಿ ಪ್ರತಿಭಟನೆ ವೇಳೆ ‘ಪಾಕಿಸ್ತಾನ್ ಜಿಂದಾಬಾದ್ ಘೋಷಣೆ ಕೂಗಿರೋದು ರಾಜ್ಯಾದ್ಯಂತ ಆಕ್ರೋಶಕ್ಕೆ ಕಾರಣವಾಗಿತ್ತು.

ಇದೀಗ ಕರಾವಳಿಯಲ್ಲಿ ಮತ್ತೆ ಅಂತಹದ್ದೇ ಘಟನೆ ನಡೆದ ಬಗ್ಗೆ ವರದಿಯಾಗಿದೆ. ಬುಧವಾರ ಗ್ರಾಮ ಪಂಚಾಯಿತಿ ಚುನಾವಣೆ ಮತ ಎಣಿಕ ಸಂದರ್ಭದಲ್ಲಿಯೇ ಪಾಕ್ ಪರ ಘೋಷಣೆ ಕೂಗಲಾಗಿದೆ.


ಸುದ್ದಿಗಳನ್ನು ತಕ್ಷಣ ಪಡೆಯಲು ನಮ್ಮ 'Telgram Channel' ಸೇರಿ

ದಕ್ಷಿಣ ಕನ್ನಡ ಜಿಲ್ಲೆಯ, ಬೆಳ್ತಂಗಡಿ ತಾಲೂಕಿನ, ಉಜಿರೆಯಲ್ಲಿ ಮತ ಎಣಿಕೆ ಕೇಂದ್ರದ ಹೊರಗಡೆಯೇ ಎಸ್‌ಡಿಪಿಐ ಕಾರ್ಯಕರ್ತರು ‘ಪಾಕಿಸ್ತಾನ ಜಿಂದಾಬಾದ್’ ಘೋಷಣೆ ಕೂಗಿದ್ದಾರೆ ಎನ್ನಲಾಗುತ್ತಿದ್ದು, ಈ ಕುರಿತ ವಿಡಿಯೋ ಇದೀಗ ಸೋಷಿಯಲ್ ಮೀಡಿಯಾದಲ್ಲಿ ಸಖತ್ ವೈರಲ್ ಆಗುತ್ತಿದೆ.

ಗ್ರಾಮ ಪಂಚಾಯಿತಿ ಚುನಾವಣೆಯಲ್ಲಿ ಗೆಲುವು ಸಾಧಿಸಿದ ಅಭ್ಯರ್ಥಿಯ ಪರವಾಗಿ ವಿಜಯೋತ್ಸವ ಆಚರಿಸುವ ವೇಳೆ ಎಸ್‌ಡಿಪಿಐ ಕಾರ್ಯಕರ್ತರು ‘ಪಾಕಿಸ್ತಾನ್ ಜಿಂದಾಬಾದ್’ ಘೋಷಣೆ ಕೂಗಿರುವ ಘಟನೆ ನಡೆದಿದೆ.

ಇದರಿಂದ ಕೆಲಕಾಲ ಸ್ಥಳದಲ್ಲಿ ಉದ್ವಿಗ್ನ ಸ್ಥಿತಿ ಕೂಡ ನಿರ್ಮಾಣವಾಗಿತ್ತು. ವಿಡಿಯೋ ಸತ್ಯಾಸತ್ಯತೆಯ ಕುರಿತು ಪರಿಶೀಲಿಸಿ ಮುಂದಿನ ಕ್ರಮ ಕೈಗೊಳ್ಳುವುದಾಗಿ ಪೊಲೀಸರು ತಿಳಿಸಿದ್ದಾರೆ.

Watch Video

error: Content is protected !!