fbpx

Please assign a menu to the primary menu location under menu

ಪೆಟ್ರೋಲ್ ತುಂಬಿಸುತ್ತಿದ್ದ ಕಾರ್‌ಗೆ ಏಕಾಏಕಿ ಬೆಂಕಿ! ಶಾಕಿಂಗ್ ವಿಡಿಯೋ ನೋಡಿ

ಪೆಟ್ರೋಲ್ ತುಂಬಿಸಲು ಬಂದ ಕಾರ್‌ಗೆ ಏಕಾಏಕಿ ಬೆಂಕಿ ಹೊತ್ತಿಕೊಂಡ ಪರಿಣಾಮ, ಕಾರು ಧಗಧಗನೆ ಹೊತ್ತಿ ಉರಿದಿರುವ ಘಟನೆ ಹಳೇ ಹುಬ್ಬಳ್ಳಿಯ ಇಂಡಿ ಪಂಪ್ ವೃತ್ತದ ಪೆಟ್ರೋಲ್ ಬಂಕ್‌ನಲ್ಲಿ ನಡೆದಿದೆ.

ಶನಿವಾರ ರಾತ್ರಿ ಇಲ್ಲಿನ ಪೆಟ್ರೋಲ್ ಬಂಕ್ನಲ್ಲಿ ಒಮ್ನಿ ಚಾಲಕ ಪೆಟ್ರೋಲ್ ಹಾಕಿಸಿಕೊಂಡು ವಾಹನ ಸ್ಟಾರ್ಟ್ ಮಾಡುತ್ತಿದ್ದಂತೆ ಇಂಜಿನ್ನಲ್ಲಿ ಬೆಂಕಿ ಹೊತ್ತಿಕೊಂಡಿದೆ. ಕ್ಷಣಾರ್ಧದಲ್ಲೇ ಈ ಬೆಂಕಿ ಪೂರ್ತಿ ವಾಹನಕ್ಕೆ ವ್ಯಾಪಿಸಿದ್ದು ಪರಿಣಾಮ ಸ್ಥಳದಲ್ಲಿ ಕೆಲಕಾಲ ಆತಂಕದ ವಾತಾವರಣ ನಿರ್ಮಾಣವಾಗಿತ್ತು.

ತಕ್ಷಣ ಪೆಟ್ರೋಲ್ ಬಂಕ್ ನಿಬ್ಬಂದಿ, ಹಳೇ ಹುಬ್ಬಳ್ಳಿ ಠಾಣೆ ಪೊಲೀಸರು ಹಾಗೂ ಅಗ್ನಿಶಾಮಕ ದಳದವರ ಸಹಾಯದಿಂದ ಬೆಂಕಿ ನಂದಿಸುವ ಮೂಲಕ ಭಾರಿ ಅನಾಹುತವಾಗೋದರಿಂದ ರಕ್ಷಿಸಿದ್ದಾರೆ..

ದುರ್ಘಟನೆ ನಡೆಯುತ್ತಿದ್ದ ಸಂದರ್ಭದಲ್ಲಿ ಅಲ್ಲೇ ಇದ್ದ ಜನರು ಕಾರು ಉರಿಯುತ್ತಿರುವ ದೃಶ್ಯಗಳನ್ನು ತಮ್ಮ ಮೊಬೈಲ್‌ನಲ್ಲಿ ಚಿತ್ರೀಕರಿಸಲು ಮುಗಿಬೀಳುತ್ತಿದ್ದರು. ತಕ್ಷಣ ಪೋಲೀಸರು ಕಾರ್ಯಪ್ರವೃತ್ತರಾಗಿ ಜನರನ್ನು ನಿಯಂತ್ರಿಸಿದ್ದಾರೆ. ಅದೃಷ್ಟವಶಾತ್ ಈ ಬೆಂಕಿ ಅನಾಹುತದಲ್ಲಿ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ. ವೈರಲ್ ವಿಡಿಯೋ ನೋಡಿ,

Watch Video

error: Content is protected !!