fbpx

ಸೇನೆ ಸೇರುವ ಮೂಲಕ ಪತಿಗೆ ಗೌರವ ಸಲ್ಲಿಸಿದ ಪುಲ್ವಾಮಾ ಹುತಾತ್ಮ ಮೇಜರ್ ವಿಭೂತಿ ಶಂಕರ್ ದೌಂಡಿಯಾಲ್ ಅವರ ಪತ್ನಿ

ಪುಲ್ವಾಮಾ ದಾಳಿಯಲ್ಲಿ ಹುತಾತ್ಮರಾದ ಮೇಜರ್ ವಿಭೂತಿ ಶಂಕರ್ ಧೌಂಡಿಯಾಲ್ ಅವರ ಪತ್ನಿ ನಿಖಿತಾ ಕೌಲ್ ಅವರು ಇಂದು ಭಾರತೀಯ ಸೇನೆಗೆ ಸೇರಿದ್ದಾರೆ. ದೇಶ ಸೇವೆಗಾಗಿ ಭಾರತೀಯ ಸೇನೆಯನ್ನು ಸೇರಿಕೊಳ್ಳುವ ಮೂಲಕ ಹುತಾತ್ಮರಾದ ತನ್ನ ಪತಿಗೆ ನಿಜವಾದ ಗೌರವವನ್ನು ಸಲ್ಲಿಸಿದ್ದಾರೆ.

ಭಾರತೀಯ ಸೇನೆ ಸೇರಲು ಬೇಕಾದ ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ಉತ್ತೀರ್ಣರಾಗುವ ಮೂಲಕ ಸೇನೆಗೆ ಆಯ್ಕೆಯಾದ ಅವರು ಇಂದು ಮೊದಲ ಬಾರಿಗೆ ಸೇನೆಯ ಸಮವಸ್ತ್ರವನ್ನು ಧರಿಸುವ ಮೂಲಕ ಹೆಮ್ಮೆಯ ಕ್ಷಣವನ್ನು ಅನುಭವಿಸಿದರು.


ಸುದ್ದಿಗಳನ್ನು ತಕ್ಷಣ ಪಡೆಯಲು ನಮ್ಮ 'Telgram Channel' ಸೇರಿ

ಕಳೆದ 2018ರಲ್ಲಿ ಜಮ್ಮು ಮತ್ತು ಕಾಶ್ಮೀರದ ಪುಲ್ವಾಮಾದಲ್ಲಿ ನಡೆದ ಭಯೋತ್ಪಾದಕ ದಾಳಿಯ ಸಂದರ್ಭದಲ್ಲಿ ಮೇಜರ್ ವಿಭೂತಿ ಶಂಕರ್ ಧೌಂಡಿಯಾಲ್ ಅವರು ಹುತಾತ್ಮರಾಗಿದ್ದರು. ದೇಶಕ್ಕಾಗಿ ಅವರು ಮಾಡಿದ ತ್ಯಾಗಕ್ಕಾಗಿ ಅವರಿಗೆ ಮರಣೋತ್ತರವಾಗಿ ಶೌರ್ಯ ಚಕ್ರವನ್ನು ನೀಡಿ ಗೌರವಿಸಲಾಗಿದೆ.

ಇಂದು ಅವರ ಪತ್ನಿ ನಿಖಿತಾ ಕೌಲ್ ಅವರು ಭಾರತೀಯ ಸೇನೆಗೆ ಸೇರುವ ಮೂಲಕ ಹುತಾತ್ಮರಾದ ತನ್ನ ಪತಿಗೆ ಗೌರವ ಸಲ್ಲಿಸಿದರು. ಆರ್ಮಿ ಕಮಾಂಡರ್ ನಾರ್ದರ್ನ್ ಕಮಾಂಡ್ ಲೆಫ್ಟಿನೆಂಟ್ ಜನರಲ್ ವೈ.ಕೆ.ಜೋಶಿ ಅವರಿಂದ ಸ್ಟಾರ್‌ ಅನ್ನು ಹೆಗಲ ಮೇಲೆ ಹೊತ್ತುಕೊಂಡು ಅವರು ಹೆಮ್ಮೆ ಪಟ್ಟರು. ವಿಡಿಯೋ ಇಲ್ಲಿದೆ ನೋಡಿ,

Watch Video

video

error: Content is protected !!