fbpx

Please assign a menu to the primary menu location under menu

ತನ್ನ ಪುಟ್ಟ ಮಗುವಿನ ಬಳಿ ಪಾಕಿಸ್ತಾನ್ ಜಿಂದಾಬಾದ್ ಹಿಂದೂಸ್ತಾನ್ ಮುರ್ದಾಬಾದ್ ಘೋಷಣೆ ಕೂಗಿಸಿದ ಮುಸ್ಲಿಂ ವ್ಯಕ್ತಿ, ವೈರಲ್ ವಿಡಿಯೋ ನೋಡಿ

ಭಾರತದಲ್ಲಿ ಹುಟ್ಟಿ, ಇಲ್ಲಿಯ ಅನ್ನ ತಿಂದು, ಹುಟ್ಟಿದ ದೇಶಕ್ಕೆ ದ್ರೋಹ ಬಗೆಯುವ ಸಾಕಷ್ಟು ದೇಶದ್ರೋಹಿಗಳು ನಮ್ಮ ನಡುವೆ ಇದ್ದಾರೆ. ಇದೀಗ ಇಂತಹದ್ದೇ ವಿಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

ಹರ್ಯಾಣದ ಗುರುಗ್ರಾಮದಲ್ಲಿ ಮುಸ್ಲಿಂ ವ್ಯಕ್ತಿಯೊಬ್ಬ ತನ್ನ ಅಪಾರ್ಟ್‌ಮೆಂಟ್‌ನಲ್ಲಿ ನಿಂತುಕೊಂಡು ಪುಟ್ಟ ಮಗುವಿನ ಬಳಿ ಜೋರಾಗಿ ದೇಶ ವಿರೋಧಿ ಘೋಷಣೆ ಕೂಗಿಸುತ್ತಿರುವ ವಿಡಿಯೋ ಇದಾಗಿದ್ದು, ವಿಡಿಯೋದಲ್ಲಿ ಮುಸ್ಲಿಂ ವ್ಯಕ್ತಿ ಮಗುವಿನ ಬಳಿ ‘ಹಿಂದೂಸ್ತಾನ್ ಮುರ್ದಾಬಾದ್ ಪಾಕಿಸ್ತಾನ್ ಜಿಂದಾಬಾದ್’ ಎಂದು ದೇಶದ್ರೋಹಿ ಘೋಷಣೆ ಕೂಗಿಸುತ್ತಿರೋದು ಸೆರೆಯಾಗಿದೆ.

ಮತಾಂಧ ದೇಶದ್ರೋಹಿಯನ್ನು ‘ಅನ್ವರ್ ಸೈಯದ್ ಫೈಜುಲ್ಲಾ ಹಶ್ಮಿ’ ಎಂದು ಗುರುತಿಸಲಾಗಿದೆ. ಈತನ ಪತ್ನಿ ‘ರೋಸಿನ ನಸೀರ್’ ವಿವಾದಿತ ಜೆಎನ್‌ಯು ವಿಶ್ವವಿದ್ಯಾನಿಲಯದಲ್ಲಿ ಪ್ರೊಫೆಸರ್ ಎಂದು ತಿಳಿದುಬಂದಿದೆ.

ಘಟನೆಯ ಬಗ್ಗೆ ಅಪಾರ್ಟ್‌ಮೆಂಟ್‌ನ ಇತರ ನಿವಾಸಿಗಳು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದು, ಮತಾಂಧ ದೇಶದ್ರೋಹಿಯ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿದ್ದಾರೆ. ಘಟನೆಯ ವಿಡಿಯೋವನ್ನು ಪಕ್ಕದ ಅಪಾರ್ಟ್‌ಮೆಂಟ್‌ ನಿವಾಸಿಗಳು ಸೆರೆಹಿಡಿದು ಪೊಲೀಸರಿಗೆ ನೀಡಿದ್ದಾರೆ.

ಸದ್ಯ ಗುರುಗ್ರಾಮ ಪೊಲೀಸರು ತನಿಖೆ ಕೈಗೆತ್ತಿಕೊಂಡಿದ್ದು, ಆರೋಪಿಯ ವಿರುದ್ದ ದೇಶದ್ರೋಹ ಪ್ರಕರಣ ದಾಖಲಿಸಿದ್ದಾರೆ. ಸದ್ಯ ಸೋಶಿಯಲ್ ಮೀಡಿಯಾದಲ್ಲಿ ಘಟನೆಯ ವಿಡಿಯೋ ವೈರಲ್ ಆಗುತ್ತಿದ್ದು, ದೇಶಪ್ರೇಮಿಗಳ ಆಕ್ರೋಶಕ್ಕೆ ಕಾರಣವಾಗಿದೆ. ವೈರಲ್ ವಿಡಿಯೋ ಇಲ್ಲಿದೆ ನೋಡಿ,

Watch Video

error: Content is protected !!