ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಕಳೆದ ಕೆಲ ದಿನಗಳಿಂದ ಭಾರೀ ಮಳೆಯಾಗುತ್ತಿದೆ. ನದಿಗಳು ಉಕ್ಕಿ ಹರಿಯುತ್ತಿದ್ದು, ಹಲವು ಕಡೆ ಭೂಕುಸಿತ, ಪ್ರಕೃತಿ ವಿಕೋಪಗಳಿಗೆ ಜನರು ಬಲಿಯಾಗಿದ್ದಾರೆ.
ವಿಜಯಪುರದಲ್ಲಿಯೂ ಕಳೆದ ಕೆಲ ದಿನಗಳಿಂದ ಧಾರಾಕಾರ ಮಳೆಯಾಗುತ್ತಿದ್ದು, ನದಿ, ಕಾಲುವೆಗಳು ತುಂಬಿ ಹರಿಯುತ್ತಿದೆ. ಇದೀಗ ವಿಡಿಯೋವೊಂದು ವೈರಲ್ ಆಗಿದ್ದು, ಮಳೆಯಿಂದಾಗಿ ಸೇತುವೆ ಮೇಲೆ ನೀರು ರಭಸವಾಗಿ ಹರಿಯುತ್ತಿದ್ದರು KSRTC ಚಾಲಕ ಬಸ್ ದಾಟಿಸಿದ್ದಾನೆ.
ನೀರಿನ ರಭಸಕ್ಕೆ ಚಾಲಕ ಬಸ್ ಮೇಲೆ ನಿಯಂತ್ರಣ ಕಳೆದುಕೊಂಡು ಇನ್ನೇನು ಕೊಚ್ಚಿಕೊಂಡು ಹೋಗಬೇಕು ಎನ್ನುವಷ್ಟರಲ್ಲಿ ಮತ್ತೆ ಬಸ್‌ನ ಮೇಲೆ ನಿಯಂತ್ರಣ ಪಡೆದ ಚಾಲಕ ಕೊನೆಗೂ ಸೇತುವೆ ದಾಟಿಸಿದ್ದಾನೆ.
ಈ ಶಾಕಿಂಗ್ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ವಿಡಿಯೋ ನೋಡಿದ ಜನರು ಬಸ್ ಚಾಲಕನ ಲೈಸೆನ್ಸ್ ಕ್ಯಾನ್ಸಲ್ ಮಾಡಿಸಿ ಎಂದು ಕಮೆಂಟ್ ಮಾಡುತ್ತಿದ್ದಾರೆ.