ಕರ್ನಾಟಕದಲ್ಲಿ ಕೋಮು ಹಿಂಸಾಚಾರಗಳು ಪದೇಪದೇ ನಡೆಯುತ್ತಲೇ ಇದೆ. ಕರಾವಳಿಯಲ್ಲಿ ಅದಾಗಲೇ ಪ್ರಕ್ಷುಬ್ಧ ವಾತಾವರಣ ಇರುವ ಸಂದರ್ಭದಲ್ಲಿಯೇ ಕೋಲಾರದಲ್ಲಿ ಹಿಂದೂ ಕಾರ್ಯಕರ್ತನ ಮೇಲೆ ಅನ್ಯ ಕೋಮಿನವರು ದಾಳಿ ಮಾಡಿರುವ ಬಗ್ಗೆ ವರದಿಯಾಗಿದೆ.
ಕೋಲಾರ ಜಿಲ್ಲೆಯ ಮಾಲೂರು ಪಟ್ಟಣದ ಮಾರಿಕಾಂಬ ರಸ್ತೆಯಲ್ಲಿ ಆರ್‌ಎಸ್‌ಎಸ್ ಮುಖಂಡನ ಮೇಲೆ ಚಾಕು ಇರಿಯಲಾಗಿದ್ದು, ಘಟನೆಯಲ್ಲಿ ಆರ್‌ಎಸ್‌ಎಸ್ ಮುಖಂಡ ರವಿ ಗಂಭೀರವಾಗಿ ಗಾಯಗೊಂಡಿದ್ದಾರೆ.
ರವಿ ಮಾಲೀಕತ್ವದ ಸ್ಟೀಲ್ ಅಂಗಡಿಯ ಮುಂಭಾಗದಲ್ಲಿ ಬೈಕ್ ಟಚ್ ಆಗಿದ್ದಕ್ಕೆ ಯುವಕರ ಮಧ್ಯೆ ಗಲಾಟೆ ನಡೆಯುತ್ತಿತ್ತು. ರವಿಯವರು ಯುವಕರಿಗೆ ಬುದ್ದಿ ಹೇಳಿ ಗಲಾಟೆ ಬಿಡಿಸಲು ಹೋಗಿದ್ದಾರೆ, ಈ ವೇಳೆ ಅಲ್ಲೇ ಇದ್ದ ಇಬ್ಬರು ಮುಸ್ಲಿಂ ಯುವಕರು ರವಿಗೆ ಚಾಕುವಿನಿಂದ ಇರಿದಿದ್ದಾರೆ.
ಚಾಕು ಇರಿತದಿಂದ ರವಿಯವರ ಕೈಗೆ ಮತ್ತು ಕಿವಿಯ ಹಿಂಭಾಗದಲ್ಲಿ ಗಂಭೀರ ಗಾಯವಾಗಿದ್ದು, ಚಿಕಿತ್ಸೆಗೆ ದಾಖಲಿಸಲಾಗಿದೆ. ಘಟನೆ ಬಗ್ಗೆ ಮಾಹಿತಿ ಪಡೆದ ಆರ್‌ಎಸ್‌ಎಸ್ ಮುಖಂಡರು ಮಾಲೂರು ಪಟ್ಟಣದ ಬಸ್ ನಿಲ್ದಾಣದಲ್ಲಿ ಪ್ರತಿಭಟನೆ ನಡೆಸಿದ್ದಾರೆ.
ಈ ಸಂಬಂಧ ಪ್ರಕರಣ ದಾಖಲಿಸಿರುವ ಪೊಲೀಸರು ಓರ್ವನನ್ನು ಬಂಧಿಸಿದ್ದು, ಚಾಕು ಇರಿದ ಇನ್ನೊಬ್ಬನಿಗಾಗಿ ಹುಡುಕಾಟ ನಡೆಸುತ್ತಿದ್ದಾರೆ.