fbpx

ಕೊರೋನಾ ವಿರುದ್ಧ ಹೋರಾಟಕ್ಕೆ ದೀಪ ಹಚ್ಚಿ ಒಗ್ಗಟ್ಟು ಪ್ರದರ್ಶಿಸಿದ ಕೋಟ್ಯಾಂತರ ಭಾರತೀಯರು

ಇಡೀ ವಿಶ್ವವನ್ನೇ ತಲ್ಲಣಗೊಳಿಸಿರುವ ಮಾರಕ ಮಹಾಮಾರಿ ಕೊರೋನಾ ಸೋಂಕು ಭಾರತದಲ್ಲೂ ರುದ್ರನರ್ತನ ತೋರುತ್ತಿದೆ.ಮಾರಕ ಸೋಂಕು ನಿಯಂತ್ರಣಕ್ಕಾಗಿ ಇಡೀ ದೇಶವನ್ನು 21 ದಿನಗಳ ಕಾಲ ಲಾಕ್ಡೌನ್ ಮಾಡಿ 14 ದಿನಗಳು ಕಳೆದರೂ ಸೋಂಕು ನಿಯಂತ್ರಣಕ್ಕೆ ಬಾರದೆ ದಿನೇದಿನೇ ವ್ಯಾಪಕವಾಗಿ ಹರಡುತ್ತಿದೆ.ಏತನ್ಮಧ್ಯೆ ಪ್ರಧಾನಿ ಮೋದಿ ಅವರು ಕೊರೋನಾ ವಿರುದ್ಧ ಹೋರಾಟದಲ್ಲಿ ನಾವೆಲ್ಲರೂ ಒಗ್ಗಟ್ಟಾಗಿದ್ದೇವೆ ಎಂಬ ಸಂದೇಶ ಸಾರುವ ಉದ್ದೇಶದಿಂದ ಇಂದು ರಾತ್ರಿ 9 ಗಂಟೆಗೆ 9 ನಿಮಿಷಗಳ ಕಾಲ ದೀಪ ಬೆಳಗುವಂತೆ ಕರೆ ನೀಡಿದ್ದರು.ಅದರಂತೆಯೇ ಈಗ ದೇಶಾದ್ಯಂತ ಇಂದು ರಾತ್ರಿ ದೀಪ ಬೆಳಗುವ ಮೂಲಕ ಕೊರೋನಾ ವಿರುದ್ಧ ನಾವೆಲ್ಲಾ ಒಗ್ಗಟ್ಟಾಗಿ ಹೋರಾಡುತ್ತಿದ್ದೇವೆ ಎಂಬ ಸಾಂಕೇತಿಕವಾಗಿ ಐಕ್ಯತೆ ಪ್ರದರ್ಶನ ಮಾಡಿದ್ದಾರೆ.

error: Content is protected !!