ಕೆಲ ದಿನಗಳ ಹಿಂದೆಯಷ್ಟೇ ಕೆಲ ಯುವಕರು ಕಲ್ಲಂಗಡಿ ಹಣ್ಣುಗಳನ್ನ ಚರಂಡಿ ನೀರಿನಲ್ಲಿ ತೊಳೆದು ಮಾರಾಟ ಮಾಡುತ್ತಿರೋ ವೀಡಿಯೋ ವೈರಲ್ ಆಗಿತ್ತು. ಇದೀಗ ಈ ಸಂಬಂಧ ಬೆಳಗಾವಿ ಜಿಲ್ಲೆ ನಿಪ್ಪಾಣಿಯ ಬಸವೇಶ್ಚರ ಚೌಕ ಠಾಣೆ ಪೊಲೀಸರು ಇಬ್ಬರು ಯುವಕರನ್ನು ಬಂಧಿಸಿದ್ದಾರೆ.ಶಾಬಾಜ್ ಮುನ್ನಾ ಸತಾರಿ (20) ಹಾಗೂ ರಿಯಾನ್ ಆಯಾಜ್ ಮಡ್ಡೆ (19) ಬಂಧಿತ ಯುವಕರಾಗಿದ್ದು, ಕಲ್ಲಂಗಡಿ ಹಣ್ಣುಗಳನ್ನ ಚರಂಡಿ ನೀರಿನಲ್ಲಿ ತೊಳೆದು ಮಾರಾಟ ಮಾಡುತ್ತಿದ್ದರು ಎಂದು ತಿಳಿದುಬಂದಿದೆ.ವಿಡಿಯೋ ವೈರಲ್ ಆಗುತ್ತಿದ್ದಂತೆ ಸ್ಥಳೀಯರು ಆರೋಪಿಗಳನ್ನು ಗುರುತಿಸಿ, ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ತಕ್ಷಣ ಕಾರ್ಯ ಪ್ರವೃತ್ತರಾದ ನಿಪ್ಪಾಣಿ ಪೊಲೀಸರು ಇಬ್ಬರನ್ನೂ ಬಂಧಿಸಿದ್ದು, ಆರೋಪಿಗಳು ಈ ಕೃತ್ಯವನ್ನು ಮಾರ್ಚ್ 28ರಂದು ಎಸಗಿದ್ದಾಗಿ ತಿಳಿದುಬಂದಿದೆ.
ಆರೋಪಿ ಯುವಕರ ವಿರುದ್ಧ ಬಸವೇಶ್ವರ ಚೌಕ ಪೊಲೀಸರು ಸ್ವಯಂ ಪ್ರೇರಿತ ದೂರು ದಾಖಲಿಸಿಕೊಂಡಿದ್ದಾರೆ. ಇಬ್ಬರನ್ನೂ ಬಂಧಿಸಿ ಹಿಂಡಲಗಾ ಜೈಲಿಗೆ ಕಳಿಸಿಕೊಟ್ಟಿದ್ದಾರೆ.
ಚರಂಡಿ ನೀರಿನಲ್ಲಿ ಕಲ್ಲಂಗಡಿ ಹಣ್ಣು ತೊಳೆದು ಮಾರಾಟ, ಇಬ್ಬರು ಯುವಕರ ಬಂಧನ
9 months agoNews Hindustani