fbpx

ಜಿಲ್ಲಾಧಿಕಾರಿಗಳೇ, ಕುರಿ ಮೇಯಿಸಲು ಅವಕಾಶ ಕೊಡಿ ಎಂದು ಮನವಿ ಮಾಡಿದ ಸಿದ್ಧರಾಮಯ್ಯ

ಕೊರೊನಾ ವೈರಸ್ ಹರಡುವ ಭೀತಿಯಿಂದ ಇಡೀ ದೇಶವೇ ಲಾಕ್‍ಡೌನ್ ಆಗಿದೆ. ಈ ಮಧ್ಯೆ ಮಾಜಿ ಮುಖ್ಯಮಂತ್ರಿ, ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರು ಕುರಿ ಮೇಯಿಸಲು ಅವಕಾಶ ಕಲ್ಪಿಸಬೇಕು ಎಂದು ಜಿಲ್ಲಾಧಿಕಾರಿಗಳ ಬಳಿ ಆಗ್ರಹಿಸಿದ್ದಾರೆ.

ಸಿದ್ದರಾಮಯ್ಯ ಅವರು ಟ್ವೀಟ್ ಮಾಡುವ ಮೂಲಕ ಕುರಿ ಮೇಯಿಸಲು ಅವಕಾಶ ಮಾಡಿಕೊಡಿ ಎಂದು ಕೇಳಿಕೊಂಡಿದ್ದಾರೆ. “ಕುರಿಗಳಿಂದ ಕೊರೊನಾ ಸೋಂಕು ತಗಲಲಿದೆ ಎಂಬ ತಪ್ಪು ಕಲ್ಪನೆಯಿಂದ ಸಿರಾ, ಚಿಕ್ಕನಾಯ್ಕನಹಳ್ಳಿ, ಹಿರಿಯೂರು, ಮಧುಗಿರಿ, ಹೊಸದುರ್ಗ ಕಡೆ ಜನ ಕುರಿಗಳನ್ನು ಹೊಡೆಯುತ್ತಿದ್ದಾರೆ. ಅಲ್ಲದೇ ಕುರಿಗಾಹಿಗಳನ್ನು ಓಡಿಸುವ ಕೆಲಸ ಮಾಡುತ್ತಿದ್ದಾರೆ. ಜಿಲ್ಲಾಧಿಕಾರಿಗಳು ಮಧ್ಯಪ್ರವೇಶಿಸಿ ಕುರಿಗಾಹಿಗಳಿಗೆ ರಕ್ಷಣೆ ಕೊಟ್ಟು ಕುರಿ ಮೇಯಿಸಲು ಅವಕಾಶ ಕಲ್ಪಿಸಬೇಕು” ಎಂದು ಆಗ್ರಹಿಸಿದ್ದಾರೆ.


ಸುದ್ದಿಗಳನ್ನು ತಕ್ಷಣ ಪಡೆಯಲು ನಮ್ಮ 'Telgram Channel' ಸೇರಿ

error: Content is protected !!